bus burnt
ಆಫ್ಘಾನಿಸ್ತಾನ: ಆಫ್ಘಾನಿಸ್ತಾನದಲ್ಲಿ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ಬಸ್ ಬೆಂಕಿಗಾಹುತಿಯಾಗಿದ್ದು, ಘಟನೆಯಲ್ಲಿ 71 ಮಂದಿ ಸುಟ್ಟು ಕರಕಲಾಗಿದ್ದಾರೆ ಎಂದು ವರದಿಯಾಗಿದೆ.
ಆಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ಪ್ರಯಾಣಿಕರ ಬಸ್ ಟ್ರಕ್ ಮತ್ತು ಬೈಕ್‍ಗೆ ಡಿಕ್ಕಿ ಹೊಡೆದ ನಂತರ ಬಸ್‍ಗೆ ಬೆಂಕಿ ಹೊತ್ತಿಕೊಂಡಿತ್ತು. ನೋಡ ನೋಡುತ್ತಲೇ 17 ಮಕ್ಕಳು ಸೇರಿದಂತೆ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರದ ವಕ್ತಾರ ಅಹ್ಮದುಲ್ಲಾ ಮುತ್ತಕಿ ಪೋಸ್ಟ್ ಮಾಡಿದ್ದು, ಸಾವಿನ ಸಂಖ್ಯೆಯನ್ನು ದೃಢಪಡಿಸಿದ್ದಾರೆ. ಇದು ಇತ್ತೀಚಿನ ದಿನಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಅಪಘಾತ ಎಂದು ಹೇಳಿದ್ದಾರೆ.
ಮೃತರಲ್ಲಿ ಹೆಚ್ಚಿನವರು ಬಸ್‍ನಲ್ಲಿ ಪ್ರಯಾಣಿಸುತ್ತಿದ್ದರು. ಟ್ರಕ್‍ನಲ್ಲಿ ಇಬ್ಬರು ಮತ್ತು ಬೈಕ್‍ನಲ್ಲಿ ಇಬ್ಬರು ಇದ್ದರು. ಆಫ್ಘಾನಿಸ್ತಾನದಲ್ಲಿ ರಸ್ತೆ ಅಪಘಾತಗಳಿಗೆ ಕಾರಣಗಳು ಆಫ್ಘಾನಿಸ್ತಾನದಲ್ಲಿ ಸಂಚಾರ ಅಪಘಾತಗಳು ಸಾಮಾನ್ಯ. ದಶಕಗಳ ಸಂಘರ್ಷ, ಕೆಟ್ಟ ರಸ್ತೆಗಳು, ಹೆದ್ದಾರಿಗಳಲ್ಲಿ ಅಪಾಯಕಾರಿ ಚಾಲನೆ ಮತ್ತು ನಿಯಮಗಳನ್ನು ನಿರ್ಲಕ್ಷಿಸುವುದು ಸೇರಿದಂತೆ ರಸ್ತೆ ಅಪಘಾತಗಳಿಗೆ ಹಲವು ಕಾರಣಗಳಿವೆ.
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…