ಹೊಸದಿಲ್ಲಿ: ಕೇರಳದ ಒಂದು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಕಾಂಗ್ರೆಸ್ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಈ ಬಗ್ಗೆ ಮಂಗಳವಾರ ಸಂಜೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಪಟ್ಟಿಯನ್ನು ಪ್ರಕಟಿಸಿದ್ದು, ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಿಂದ ರಾಹುಲ್ ಮಾಂಕೂಟತ್ತಿಲ್ ಹಾಗೂ ಚೆಲ್ಲಕ್ಕಾರ ಮೀಸಲು ಕ್ಷೇತ್ರಕ್ಕೆ ರಮ್ಯಾ ಹರಿದಾಸ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂತಿಮಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.
ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.