ಪಾಟ್ನಾ: ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ ನಿತೀಶ್ ಕುಮಾರ್ ಆರ್ಜೆಡಿಯ ತೇಜಸ್ವಿ ಯಾದವ್ ಅವರೊಂದಿಗೆ ಮತ್ತೆ ಮಹಾಘಟಬಂಧನ್ ಸರ್ಕಾರವನ್ನು ರಚಿಸಿದ್ದಾರೆ.
ಇಂದು ನಿತೀಶ್ ಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರಲ್ಲಿ ಜೆಡಿಯುಗಿಂತ ಆರ್ಜೆಡಿಗೆ ಹೆಚ್ಚು ಸಚಿವ ಸ್ಥಾನ ಸಿಕ್ಕಿದೆ. ಹಿಂದಿನ ಮಹಾಮೈತ್ರಿಕೂಟ ಸರ್ಕಾರಕ್ಕಿಂತ ಕಾಂಗ್ರೆಸ್ನ ಸ್ಥಾನಮಾನ ಕಡಿಮೆಯಾಗಿದೆ. ಜೆಡಿಯು ಸಂಸದೀಯ ಪಕ್ಷದ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಅವರಿಗೆ ಭಾರೀ ಹಿನ್ನಡೆಯಾಗಿದೆ. ಉಪಮುಖ್ಯಮಂತ್ರಿಯಾಗಿರುವ ತೇಜಸ್ವಿ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಸೇರಿದಂತೆ 31 ಶಾಸಕರು ಇಂದು ಬಿಹಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಹಾರದ ಹೊಸ ಸಂಪುಟದ ಭಾಗವಾಗಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಯಾದವ್ ಸೇರಿದಂತೆ 31 ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ನಿರೀಕ್ಷೆಯಂತೆ ರಾಜ್ಯದಲ್ಲಿ ಏಕೈಕ ದೊಡ್ಡ ಪಕ್ಷವಾಗಿರುವ ಆರ್ಜೆಡಿಗೆ ಸಚಿವ ಸ್ಥಾನದ ಸಿಂಹಪಾಲು ಸಿಕ್ಕಿದೆ. ಸಂಪುಟ ವಿಸ್ತರಣೆಗೂ ಮುನ್ನ ಜೆಡಿಯು ಶಾಸಕ ಲೇಶಿ ಸಿಂಗ್ ಅವರು ಹೊಸ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಮಂಗಳವಾರ ಖಚಿತಪಡಿಸಿದ್ದರು.
ಸಂಪುಟ ವಿಸ್ತರಣೆಯ ಭಾಗವಾಗಿ ಇಂದು ಬಿಹಾರದ 31 ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದು, ನಿರೀಕ್ಷೆಯಂತೆ ಆರ್ಜೆಡಿ ಸಚಿವ ಸ್ಥಾನಗಳಲ್ಲಿ ಸಿಂಹಪಾಲು ಪಡೆಯುವಲ್ಲಿ ಯಶಸ್ವಿಯಾಗಿದೆ. ಆರ್ಜೆಡಿ ಬಳಿಕ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷಕ್ಕೆ ಹೆಚ್ಚು ಸಚಿವ ಸ್ಥಾನ ಸಿಕ್ಕಿದೆ. ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಆರ್ಜೆಡಿ ಶಾಸಕರಲ್ಲಿ ಉಪ ಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಯಾದವ್ ಕೂಡ ಸೇರಿದ್ದಾರೆ. ಇದೇ ವೇಳೆ ಜೆಡಿಯುನ ಲೇಶಿ ಸಿಂಗ್ ಕೂಡ ಪ್ರಮಾಣ ವಚನ ಸ್ವೀಕರಿಸಿದರು.
ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ನೇತೃತ್ವದ ಬಿಹಾರ ಸರ್ಕಾರದಲ್ಲಿ ಪ್ರಸ್ತುತ ಕಾಂಗ್ರೆಸ್ ಕೋಟಾದ ಇಬ್ಬರು ಸಚಿವರು ಮಾತ್ರ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.