ನವದೆಹಲಿ: ಸಚಿವ ಸಂಪುಟ ಪುನರ್ ರಚನೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ ಅವರು, ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಮಾಹಿತಿ ಇಲ್ಲ. ಇದನ್ನು ನಿರ್ಧಾರ ಮಾಡುವುದು ಹೈಕಮಾಂಡ್. ಸಿಎಂ ಹಾಗೂ ಡಿಸಿಎಂ ದೆಹಲಿಗೆ ಬಂದಿದ್ದು ಯಾಕೆ ಎಂದು ಗೊತ್ತಿಲ್ಲ. ಹೈಕಮಾಂಡ್ ಜೊತೆ ಸಿಎಂ ಹಾಗೂ ಡಿಸಿಎಂ ಸಭೆ ನಡೆಸಲಿದ್ದಾರೆ ಎಂದರು.





