ಕೃಷ್ಣಗಿರಿ : ತಮಿಳುನಾಡಿನ ಹೊಸೂರಿನ ನಾಗಮಂಗಲಂನಲ್ಲಿರುವ ಮಹಿಳಾ ಹಾಸ್ಟೆಲ್‌ನ ಸ್ನಾನಗೃಹದಲ್ಲಿ ಗುಪ್ತ ಕ್ಯಾಮೆರಾ ಅಳವಡಿಸಿದ ಆರೋಪದ ಮೇಲೆ ಒಡಿಶಾ ಮೂಲದ ಮಹಿಳೆ ಮತ್ತು ಆಕೆಯ ಸ್ನೇಹಿತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ.
ಕೃಷ್ಣಗಿರಿ ಜಿಲ್ಲೆಯ ನಾಗಮಂಗಲಂನಲ್ಲಿರುವ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಸೌಲಭ್ಯದ ನೂರಾರು ಮಹಿಳಾ ಉದ್ಯೋಗಿಗಳು ವಿಡಿಯಾಲ್ ರೆಸಿಡೆನ್ಸಿ ಎಂಬ ಕಂಪೆನಿಯ ಹಾಸ್ಟೆಲ್‌ನ ಸ್ನಾನಗೃಹದೊಳಗೆ ಗುಪ್ತ ಕ್ಯಾಮೆರಾ ಪತ್ತೆಯಾದ ನಂತರ ಪ್ರತಿಭಟನೆ ನಡೆಸಿದ್ದರು.
ಇದನ್ನೂ ಓದಿ:-ಬಿಹಾರ ಚುನಾವಣೆ : ಮೊದಲ ಹಂತದಲ್ಲಿ ಶೇ.60ರಷ್ಟು ಮತದಾನ
೧೧ನೇ ಮಹಡಿಯ ರಚನೆಯು ಎಂಟು ಬ್ಲಾಕ್‌ಗಳನ್ನು ಹೊಂದಿದ್ದು, ೬,೦೦೦ಕ್ಕೂ ಹೆಚ್ಚು ಮಹಿಳೆಯರಿಗೆ ವಸತಿ ಒದಗಿಸುತ್ತದೆ.
ನಾಗಮಂಗಲಂನಲ್ಲಿರುವ ಕಂಪೆನಿಯ ಸೌಲಭ್ಯದ ಉದ್ಯೋಗಿಯಾಗಿದ್ದ ಒಡಿಶಾದ ೨೨ ವರ್ಷದ ನೀಲುಕುಮಾರಿ ಗುಪ್ತಾ ಹಾಸ್ಟೆಲ್‌ನಲ್ಲಿ ತಂಗಿದ್ದರು. ಅವರು ತಮ್ಮ ಸ್ನೇಹಿತ ಸಂತೋಷ್ (೨೫) ಅವರ ಪ್ರಚೋದನೆಯ ಮೇರೆಗೆ ಈ ಕ್ಯಾಮೆರಾ ಅಳವಡಿಸಿದ್ದರು ಎನ್ನಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ಪಿ.ತಂಗದುರೈ ಅವರ ಪ್ರಕಾರ, ಸಂತೋಷ್ ಅವರನ್ನು ನವೆಂಬರ್ ೫ ರಂದು ಬೆಂಗಳೂರಿನಿಂದ ಉದನಪಲ್ಲಿಯಿಂದ ಪೊಲೀಸ್ ತಂಡ ಬಂಧಿಸಿತು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…