ನವದೆಹಲಿ: ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಮೂಲಕ ಟ್ರುಡೋ ತಮ್ಮ ಪಕ್ಷ ಲೀಬರಲ್ ಪಾರ್ಟಿಯ ನಾಯಕ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.
ಕಳೆದ ಒಂದು ತಿಂಗಳಿನಿಂದ ಟ್ರುಡೋ ಅವರ ನಾಯಕತ್ವಕ್ಕೆ ಅವರ ಪಕ್ಷದ ಸಂಸದರಿಂದಲೇ ಅಪಸ್ವರ ಕೇಳಿಬರುತ್ತಿತ್ತು.
ಖಲಿಸ್ತಾನ್ ಉಗ್ರರ ವಿಚಾರದಲ್ಲಿ ಇಲ್ಲಸಲ್ಲದ್ದನ್ನು ಮಾತನಾಡಿ ಜಸ್ಟಿನ್ ಟ್ರುಡೋ ಭಾರತದ ಕೆಂಗಣ್ಣಿಗೂ ಗುರಿಯಾಗಿದ್ದರು.
ಟ್ರುಡೋ ರಾಜೀನಾಮೆಯಿಂದ ಕೆನಡಾದಲ್ಲಿ ಅವಧಿಗೂ ಮುನ್ನವೇ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.