ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದ ನಂತರ ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್ ಇಂದು ವಜಾಮಾಡಿದೆ.
ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ.ಪಾದ್ರಿವಾಲಾ, ಮನೋಜ್ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠ ಇಂದು ಸುದೀರ್ಘ ಕಾಲ ವಿಚಾರಣೆ ನಡೆಸಿತು.
ವಾದ-ವಿವಾದ ಆಲಿಸಿದ ಸುಪ್ರೀಂಕೋರ್ಟ್ ಅರ್ಜಿದಾರರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು, ಯುಜಿಸಿ-ನೆಟ್ ಪರೀಕ್ಷೆ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.
ಇನ್ನು ಕೇಂದ್ರ ಸಚಿವಾಲಯವು ಜೂನ್.19ರಂದು ಯುಜಿಸಿ-ನೆಟ್ ಪರೀಕ್ಷೆಯನ್ನು ರದ್ದು ಮಾಡಿ, ಪ್ರಕರಣದ ತನಿಖೆ ನಡೆಸುವ ಹೊಣೆಯನ್ನು ಸಿಬಿಐಗೆ ವಹಿಸಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶರು ವಜಾಗೊಳಿಸಿದ್ದು, ಪ್ರಕರಣದ ಬಗ್ಗೆ ವಿದ್ಯಾರ್ಥಿಗಳೇ ಅರ್ಜಿ ಸಲ್ಲಿಸಲಿ. ನೀವು ತಲೆಕೆಡಿಸಿಕೊಳ್ಳುವುದು ಬೇಡ ಎಂದು ಹೇಳಿದೆ.
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…