ದೇಶ- ವಿದೇಶ

ಯುಜಿಸಿ-ನೆಟ್‌ ಪರೀಕ್ಷೆ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಆರೋಪ ಕೇಳಿ ಬಂದ ನಂತರ ಯುಜಿಸಿ-ನೆಟ್‌ ಪರೀಕ್ಷೆಯನ್ನು ರದ್ದಪಡಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರಿಂಕೋರ್ಟ್‌ ಇಂದು ವಜಾಮಾಡಿದೆ.

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ.ಪಾದ್ರಿವಾಲಾ, ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠ ಇಂದು ಸುದೀರ್ಘ ಕಾಲ ವಿಚಾರಣೆ ನಡೆಸಿತು.

ವಾದ-ವಿವಾದ ಆಲಿಸಿದ ಸುಪ್ರೀಂಕೋರ್ಟ್‌ ಅರ್ಜಿದಾರರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡು, ಯುಜಿಸಿ-ನೆಟ್‌ ಪರೀಕ್ಷೆ ರದ್ದು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಇನ್ನು ಕೇಂದ್ರ ಸಚಿವಾಲಯವು ಜೂನ್.‌19ರಂದು ಯುಜಿಸಿ-ನೆಟ್‌ ಪರೀಕ್ಷೆಯನ್ನು ರದ್ದು ಮಾಡಿ, ಪ್ರಕರಣದ ತನಿಖೆ ನಡೆಸುವ ಹೊಣೆಯನ್ನು ಸಿಬಿಐಗೆ ವಹಿಸಿದೆ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಧೀಶರು ವಜಾಗೊಳಿಸಿದ್ದು, ಪ್ರಕರಣದ ಬಗ್ಗೆ ವಿದ್ಯಾರ್ಥಿಗಳೇ ಅರ್ಜಿ ಸಲ್ಲಿಸಲಿ. ನೀವು ತಲೆಕೆಡಿಸಿಕೊಳ್ಳುವುದು ಬೇಡ ಎಂದು ಹೇಳಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

11 mins ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

8 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

8 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

8 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

8 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

8 hours ago