Mysore
25
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಮುಂದಿನ 5-6 ತಿಂಗಳಲ್ಲಿ ಮಹಿಳೆಯರಿಗೆ ಕ್ಯಾನ್ಸರ್‌ ಲಸಿಕೆ

ಮುಂಬೈ: ಮಹಿಳೆಯರ ಮೇಲೆ ಅತಿ ಹೆಚ್ಚು ಪರಿಣಾಮ ಬೀರುತ್ತಿರುವ ಕ್ಯಾನ್ಸರ್‌ ವಿರುದ್ಧ ಹೋರಾಡಲು ಲಸಿಕೆ ಐದರಿಂದ ಆರು ತಿಂಗಳಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರತಾಪ್‌ರಾವ್‌ ಜಾಧವ್‌ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಆಯುಷ್‌ ಇಲಾಖೆ ಸಚಿವರಾದ ಪ್ರತಾಪ್‌ರಾವ್‌ ಜಾಧವ್‌ ಅವರು, ಒಂಭತ್ತರಿಂದ 16 ವರ್ಷ ವಯಸ್ಸಿನವರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ.

ಲಸಿಕೆಯ ಕುರಿತು ಸಂಶೋಧನೆ ಬಹುತೇಕ ಪೂರ್ಣಗೊಂಡಿದೆ. ಪ್ರಯೋಗಗಳು ಕೂಡ ನಡೆಯುತ್ತಿವೆ. ದೇಶದಲ್ಲಿ ಕ್ಯಾನ್ಸರ್‌ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ಕ್ರಮಗಳನ್ನು ಆರಂಭಿಸಿದೆ ಎಂದರು.

30 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಆಸ್ಪತ್ರೆಗಳಲ್ಲಿ ತಪಾಸಣೆಗೆ ಒಳಗಾಗಬೇಕು. ಆರಂಭಿಕ ಹಂತದಲ್ಲೇ ರೋಗ ಪತ್ತೆಗಾಗಿ ಡೇಕೇರ್‌ ಕ್ಯಾನ್ಸರ್‌ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಬಳಸುವ ಔಷಧಿಗಳ ಮೇಲಿನ ಕಸ್ಟಮ್ಸ್‌ ಸುಂಕವನ್ನು ಸರ್ಕಾರ ಮನ್ನಾ ಮಾಡಿದೆ ಎಂದು ಹೇಳಿದರು.

Tags:
error: Content is protected !!