ಮುಂಬೈ: ಮಹಿಳೆಯರ ಮೇಲೆ ಅತಿ ಹೆಚ್ಚು ಪರಿಣಾಮ ಬೀರುತ್ತಿರುವ ಕ್ಯಾನ್ಸರ್ ವಿರುದ್ಧ ಹೋರಾಡಲು ಲಸಿಕೆ ಐದರಿಂದ ಆರು ತಿಂಗಳಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರತಾಪ್‌ರಾವ್ ಜಾಧವ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಆಯುಷ್ ಇಲಾಖೆ ಸಚಿವರಾದ ಪ್ರತಾಪ್‌ರಾವ್ ಜಾಧವ್ ಅವರು, ಒಂಭತ್ತರಿಂದ 16 ವರ್ಷ ವಯಸ್ಸಿನವರು ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ.
ಲಸಿಕೆಯ ಕುರಿತು ಸಂಶೋಧನೆ ಬಹುತೇಕ ಪೂರ್ಣಗೊಂಡಿದೆ. ಪ್ರಯೋಗಗಳು ಕೂಡ ನಡೆಯುತ್ತಿವೆ. ದೇಶದಲ್ಲಿ ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಪರಿಹರಿಸಲು ಕ್ರಮಗಳನ್ನು ಆರಂಭಿಸಿದೆ ಎಂದರು.
30 ವರ್ಷಕ್ಕಿಂತ ಮೇಲ್ಪಟ್ಟ ಮಹಿಳೆಯರು ಆಸ್ಪತ್ರೆಗಳಲ್ಲಿ ತಪಾಸಣೆಗೆ ಒಳಗಾಗಬೇಕು. ಆರಂಭಿಕ ಹಂತದಲ್ಲೇ ರೋಗ ಪತ್ತೆಗಾಗಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸುವ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸರ್ಕಾರ ಮನ್ನಾ ಮಾಡಿದೆ ಎಂದು ಹೇಳಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…