ನವದೆಹಲಿ: ಭಾರತದ ಬೆಳವಣಿಗೆ ಹಾದಿಯಲ್ಲಿ ಬಂಡವಾಳ ಮಾರುಕಟ್ಟೆಯ ಪಾತ್ರ ಮಹತ್ವದ್ದಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಹೇಳಿದರು.
ಸೋಮವಾರ ಲೋಕಸಭೆಯಲ್ಲಿ 2023-24ನೇ ಸಾಲಿನ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿ ಮಾತನಾಡಿದ ಅವರು, ಮಾರುಕಟ್ಟೆ ತಂತ್ರಜ್ಞಾನವು ನಾವೀನ್ಯತೆ ಹಾಗೂ ಡಿಜಿಲೀಕರಣದ ಮೂಲಕ ಇದು ಇನ್ನಷ್ಟು ವಿಸ್ತರವಾಗಿದೆ ಎಂದರು.
ಭಾರತವು ಜಾಗತಿಕ ಮಟ್ಟದಲ್ಲಿ ಆರ್ಥಿಕ ಹಾಗೂ ರಾಜಕೀಯ ಸಮಸ್ಯೆ ಎದುರಿಸುತ್ತಿದ್ದರೂ ಭಾರತದ ಮಾರುಕಟ್ಟೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಬಡ್ಡಿ ದರ ಹಾಗೂ ಸರಕುಗಳ ಬೆಲೆಯಲ್ಲಿ ಏರಿಕೆಯ ನಡುವೆಯೂ ಭಾರತದ ಬಂಡವಾಳ ಮಾರುಕಟ್ಟೆಯು ಜಗತ್ತಿನಲ್ಲಿ ವೃದ್ಧಿ ಕಾಣುತ್ತಿರುವ ಅತ್ಯುತ್ತಮ ಮಾರುಕಟ್ಟೆ ಎನಿಸಿಕೊಂಡಿದೆ ಎಂದಿದ್ದಾರೆ.
ಪ್ರಸ್ತುತ ಆರ್ಥಿಕ ವರ್ಷದಲ್ಲಿ ಬಿಎಸ್‌ಇ ಸೆನ್ಸೆಕ್ಸ್ ಶೇ 25ರಷ್ಟು ಬೆಳವಣಿಗೆ ಕಂಡಿದೆ. ಇದು 2025 ರವರೆಗೂ ಮುಂದುವರೆಯುವ ನಂಬಿಕೆಯಿದೆ. ಜುಲೈ 3 ರಂದು 30 ಷೇರುಗಳ ಇಂಡೆಕ್ಸ್ ದಿನದ ವಹಿವಾಟಿನಲ್ಲಿ 80ಸಾವಿರದ ಗಡಿಯನ್ನು ಮೊದಲ ಬಾರಿಗೆ ದಾಟಿ ಇತಿಹಾಸ ನಿರ್ಮಿಸಿದೆ ಎಂದು ಹೇಳಿದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…