ದೇಶ- ವಿದೇಶ

ಆಂಧ್ರಪ್ರದೇಶ| ಬಾವಿಗೆ ಬಿದ್ದ ಕಾರು: ಕರ್ನಾಟಕದ ಮೂವರು ಸಾವು

ಅನ್ನಮಯ್ಯ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪ್ಪಲ್ಲಿ ಗ್ರಾಮದ ಬಳಿ ಇಂದು ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬಾವಿಗೆ ಉರುಳಿಬಿದ್ದಿದ್ದು, ಕರ್ನಾಟಕದ ಮೂವರು ಸಾವನ್ನಪ್ಪಿದ್ದಾರೆ.

ಮೃತರನ್ನು ಚಿಂತಾಮಣಿ ತಾಲ್ಲೂಕಿನ ಮುತ್ತಕದಲ್ಲಿ ಗ್ರಾಮದ ನಿವಾಸಿಗಳಾದ ಲೋಕೇಶ, ಚಂದನಹಳ್ಳಿ ಗ್ರಾಮದ ಶಿವಾನಂದ, ಕೋಲಾರ ಜಿಲ್ಲೆಯ ಸುಗಟೂರು ಗ್ರಾಮದ ಚಲಪತಿ ಎಂದು ಗುರುತಿಸಲಾಗಿದೆ. ಇನ್ನು ಅಪಘಾತದಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಹಿತಿ ಪ್ರಕಾರ ಅಡುಗೆ ಕೆಲಸಕ್ಕಾಗಿ ಒಟ್ಟು ಐವರು ಕಾರಿನಲ್ಲಿ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ. ಬಾವಿ ಆಳವಾಗಿದ್ದರಿಂದ ಕಾರಿನೊಳಗೆ ಮೂವರು ಸಾವನ್ನಪ್ಪಿದ್ದಾರೆ. ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಪೊಲೀಸರು ಬಾವಿಯಲ್ಲಿ ಬಿದ್ದಿದ್ದ ಕಾರನ್ನು ಕ್ರೇನ್‌ ಮೂಲಕ ಮೇಲಕ್ಕೆತ್ತಿದ್ದಾರೆ. ಈ ಸಂಬಂಧ ಪಿಲೇರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಆಂದೋಲನ ಡೆಸ್ಕ್

Recent Posts

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

1 hour ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

1 hour ago

ಕೋಳಿ ಮೊಟ್ಟೆಗೆ ಬರ: ಏರಿದ ದರ

ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ  ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…

2 hours ago

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

11 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

11 hours ago