Mysore
30
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ಗುಜರಾತ್‌ನಲ್ಲಿ ಕಾರು–ಲಾರಿ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ 7 ಮಂದಿ ಸಾವು!

ಗುಜರಾತ್‌: ಇಲ್ಲಿನ ಕಚ್‌ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಶನಿವಾರ ತಡರಾತ್ರಿ ಭುಜ್‌–ಖಾವ್ಡಾ ರಾಷ್ಟ್ರೀಯ ಹೆದ್ದಾರಿಯ ವೇಕಾರಿಯಾ ರಣ್‌ ಸಮೀಪ ಕಾರು ಮತ್ತು ಟ್ರೈಲರ್‌ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತರಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದ್ದಾರೆ.

ಭುಜ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉತ್ತರಾಖಂಡ ಮೂಲದ ಸೇನಾ ಯೋಧರ ಕುಟುಂಬದವರು ಹಾಗೂ ಸಂಬಂಧಿಕರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Tags:
error: Content is protected !!