ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಶಿಕ್ಷೆಯ ಪ್ರಮಾಣವನ್ನು ದೆಹಲಿ ಹೈಕೋರ್ಟ್ ಕಾಯ್ದಿರಿಸಿದ್ದು, ಫೆ.25ಕ್ಕೆ ಅಂತಿಮವಾಗಿ ತೀರ್ಪು ಪ್ರಕಟಿಸಲಾಗುವುದು ಎಂದು ತಿಳಿಸಿದೆ.
ದೆಹಲಿ ಹೈಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೋಷಿ ಎಂದು ಫೆ.12 ರಂದು ತೀರ್ಪು ಪ್ರಕಟಿಸಿತ್ತು. ಆದರೆ ಅವರಿಗೆ ಮರಣ ದಂಡನೆ ವಿಧಿಸಬೇಕೆಂದು ಪ್ರಾಸಿಕ್ಯೂಷನ್ ನ್ಯಾಯಾಲಯವನ್ನು ಕೋರಿತ್ತು.
ಈ ಕುರಿತು ಇಂದು(ಫೆಬ್ರವರಿ.21) ದೆಹಲಿ ಹೈಕೋರ್ಟ್ ಶಿಕ್ಷೆಯ ಬಗ್ಗೆ ವಾದ-ಪ್ರತಿವಾದಗಳನ್ನು ಆಲಿಸಿ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ.25 ಪ್ರಕಟಿಸಲಾಗುವುದು ಎಂದು ಆದೇಶ ಹೊರಡಿಸಿದೆ.
ಏನಿದು ಪ್ರಕರಣ?
1984ರ ನವೆಂಬರ್ 1 ರಂದು ಸಿಖ್ ವಿರೋಧಿ ದಂಗೆಯ ವೇಳೆ ಸರಸ್ವತಿ ವಿಹಾರ್ ಬಳಿ ಜಸ್ವಂತ್ ಸಿಂಗ್ ಮತ್ತು ಅವರ ಮಗ ತರುಣ್‌ದೀಪ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರನ್ನು ಮುಖ್ಯ ಆರೋಪಿ ಎಂದು ಬಂಧಿಸಲಾಗಿತ್ತು.
ಈ ದಾಳಿಯನ್ನು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಗೆ ಪ್ರತಿಕಾರ ತೀರಿಸಿಕೊಳ್ಳಲು ಮಾರಕಾಸ್ತ್ರಗಳನ್ನು ಹಿಡಿದಿದ್ದ ಗುಂಪು, ಸಿಖ್ ಸಮುದಾಯದವರಿಗೆ ಸೇರಿದ ಸ್ಥಳಗಳಲ್ಲಿ ಲೂಟಿ ಮಾಡಿ, ಗಲಭೆ ಸೃಷ್ಟಿಸಿ ಅಪಾರ ಹಾನಿಗೆ ಕಾರಣವಾಗಿತ್ತು. ಆ ವೇಳೆ ಮನೆಗಳಿಗೆ ನುಗ್ಗಿದ ಉದ್ರಿಕ್ತರು, ಪತಿ ಮತ್ತು ಮಗನನ್ನು ಹತ್ಯೆ ಮಾಡಿದ್ದರು. ಆದರೆ ಈ ಪ್ರಕರಣದ ಬಗ್ಗೆ ಜಸ್ವಂತ್ ಪತ್ನಿ ಮನೆಗೆ ನುಗ್ಗಿ ಲೂಟ ಮಾಡಿದಲ್ಲದೇ ಬೆಂಕಿ ಹಚ್ಚಿದ್ದರು ಎಂದು ಸಾಕ್ಷಿ ಹೇಳಿರುವುದು ಪ್ರಾಸಿಕ್ಯೂಷನ್ ಆರೋಪ ಪಟ್ಟಿಯಲ್ಲಿ ದಾಖಲಾಗಿದೆ.
ಇನ್ನು ಸಜ್ಜನ್ ಕುಮಾರ್ ಅವರು ಪ್ರಕರಣದಲ್ಲಿ ಭಾಗಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ತಿಳಿಸಿದ್ದ ನ್ಯಾಯಾಲಯ 2021 ರ ಡಿಸೆಂಬರ್ 16 ರಂದು ಈ ಪ್ರಕರಣದಲ್ಲಿ ಸಜ್ಜನ್ ಕುಮಾರ್ ವಿರುದ್ಧ ಆರೋಪಿಸಿತ್ತು.
ವಾಷಿಂಗ್ಟನ್: ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್,…
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು…
ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…
ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…
ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್-II ಮಿಷನ್ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…