ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಶುಕ್ರವಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಇದು ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿದ್ದು, ದೇಶಾದ್ಯಂತದ ಸುಮಾರು 1,150ಕ್ಕೂ ಹೆಚ್ಚು ಟೋಲ್ ಪ್ಲಾಜಾಗಳಲ್ಲಿ ಈ ನಿಯಮ ಅನ್ವಯವಾಗಲಿದೆ ಎಂದು ಹೇಳಿದೆ.
ಎಲ್ಲಾ ಟೋಲ್ ಪಾವತಿಗಳು ಡಿಜಿಟಲ್ ವಿಧಾನದ ಮೂಲಕ ಮಾತ್ರ ನಡೆಯಲಿವೆ. ಮುಖ್ಯವಾಗಿ ಫಾಸ್ಟ್‌ಟ್ಯಾಗ್ (FASTag) ಮತ್ತು ಯುಪಿಐ (UPI) ಮೂಲಕ ಪಾವತಿ ಸ್ವೀಕರಿಸಲಾಗುವುದು. ಈ ಸುಧಾರಣೆಯಿಂದ ಟೋಲ್‌ಗಳಲ್ಲಿ ಜನದಟ್ಟಣೆ ಕಡಿಮೆ ಮತ್ತು ಟೋಲ್ ವಹಿವಾಟು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕರಿಗೆ ಸಲಹೆ
ಈ ಹೊಸ ನಿಯಮ ಜಾರಿಗೆ ಬಂದರೆ FASTag ಅಥವಾ UPI ಇಲ್ಲದಿದ್ದರೆ ಟೋಲ್ ಪಾವತಿಸಲು ಸಾಧ್ಯವಿಲ್ಲ. ಆದ್ದರಿಂದ FASTag ಅನ್ನು ಮುಂಚಿತವಾಗಿ ಖರೀದಿಸಿ ಅಥವಾ ರೀಚಾರ್ಜ್ ಮಾಡಿ UPI ಆಪ್‌ಗಳನ್ನು ರೆಡಿ ಇರಿಸಿಕೊಳ್ಳಿ ಎಂದು ಪ್ರಾಧಿಕಾರಿ ಸಲಹೆ ನೀಡಿದೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…