ದೇಶ- ವಿದೇಶ

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಶುಕ್ರವಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಇದು ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿದ್ದು, ದೇಶಾದ್ಯಂತದ ಸುಮಾರು 1,150ಕ್ಕೂ ಹೆಚ್ಚು ಟೋಲ್ ಪ್ಲಾಜಾಗಳಲ್ಲಿ ಈ ನಿಯಮ ಅನ್ವಯವಾಗಲಿದೆ ಎಂದು ಹೇಳಿದೆ.

ಎಲ್ಲಾ ಟೋಲ್ ಪಾವತಿಗಳು ಡಿಜಿಟಲ್ ವಿಧಾನದ ಮೂಲಕ ಮಾತ್ರ ನಡೆಯಲಿವೆ. ಮುಖ್ಯವಾಗಿ ಫಾಸ್ಟ್‌ಟ್ಯಾಗ್‌ (FASTag) ಮತ್ತು ಯುಪಿಐ (UPI) ಮೂಲಕ ಪಾವತಿ ಸ್ವೀಕರಿಸಲಾಗುವುದು. ಈ ಸುಧಾರಣೆಯಿಂದ ಟೋಲ್‌ಗಳಲ್ಲಿ ಜನದಟ್ಟಣೆ ಕಡಿಮೆ ಮತ್ತು ಟೋಲ್‌ ವಹಿವಾಟು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರಿಗೆ ಸಲಹೆ
ಈ ಹೊಸ ನಿಯಮ ಜಾರಿಗೆ ಬಂದರೆ FASTag ಅಥವಾ UPI ಇಲ್ಲದಿದ್ದರೆ ಟೋಲ್ ಪಾವತಿಸಲು ಸಾಧ್ಯವಿಲ್ಲ. ಆದ್ದರಿಂದ FASTag ಅನ್ನು ಮುಂಚಿತವಾಗಿ ಖರೀದಿಸಿ ಅಥವಾ ರೀಚಾರ್ಜ್ ಮಾಡಿ UPI ಆಪ್‌ಗಳನ್ನು ರೆಡಿ ಇರಿಸಿಕೊಳ್ಳಿ ಎಂದು ಪ್ರಾಧಿಕಾರಿ ಸಲಹೆ ನೀಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

13 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago