ನವದೆಹಲಿ: ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಖ್ಯಾತ ಉದ್ಯಮಿ ವಿಜಯ್ ಮಲ್ಯ ವಿರದ್ಧ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ ಮಾಡಿದೆ.
ಓವರ್‌ಸೀಸ್ ಬ್ಯಾಂಕ್‌ನಿಂದ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮಲ್ಯ, ಈವರೆಗೆ ಸಾಲ ಮರುಪಾವತಿ ಮಾಡಿಲ್ಲ. ಹಿಗಾಗಿ ಅವರ ಮೇಲೆ ಬಂಧನದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.
2007-2012ರ ಅವಧಿಯಲ್ಲಿ 180 ಕೋಟಿ ರೂ. ಸಾಲ ಮಾಡಿದ್ದರು. ಆದರೆ ಈವರೆಗೆ ಯಾವುದೇ ಸಾಲವನ್ನು ಮಲ್ಯ ಮರುಪಾವತಿಸಿಲ್ಲ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಮಲ್ಯ ಸೇರಿ ಹತ್ತು ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ವಿಜಯ್ ಮಲ್ಯಗೆ ಜಾಮೀನು ರಹಿತ ವಾರೆಂಟ್ ನೀಡಿದ್ದಾರೆ ಹಾಗೂ ಆರೋಪಿಗಳಿಗೆ ಸಮನ್ಸ್ ನೀಡಲಾಗಿದೆ.