ದೇಶ- ವಿದೇಶ

ವಿಜಯ್‌ ಮಲ್ಯ ವಿರುದ್ಧ ಜಾಮೀನು ರಹಿತ ವಾರೆಂಟ್‌ ಜಾರಿ!

ನವದೆಹಲಿ: ಸಾಲ ಮಾಡಿ ವಿದೇಶಕ್ಕೆ ಓಡಿ ಹೋಗಿರುವ ಖ್ಯಾತ ಉದ್ಯಮಿ ವಿಜಯ್‌ ಮಲ್ಯ ವಿರದ್ಧ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ ಮಾಡಿದೆ.

ಓವರ್‌ಸೀಸ್‌ ಬ್ಯಾಂಕ್‌ನಿಂದ ಸಾಲ ಪಡೆದು ವಿದೇಶಕ್ಕೆ ಪರಾರಿಯಾಗಿರುವ ಮಲ್ಯ, ಈವರೆಗೆ ಸಾಲ ಮರುಪಾವತಿ ಮಾಡಿಲ್ಲ. ಹಿಗಾಗಿ ಅವರ ಮೇಲೆ ಬಂಧನದ ಜಾಮೀನು ರಹಿತ ವಾರೆಂಟ್‌ ಜಾರಿ ಮಾಡಲಾಗಿದೆ.

2007-2012ರ ಅವಧಿಯಲ್ಲಿ 180 ಕೋಟಿ ರೂ. ಸಾಲ ಮಾಡಿದ್ದರು. ಆದರೆ ಈವರೆಗೆ ಯಾವುದೇ ಸಾಲವನ್ನು ಮಲ್ಯ ಮರುಪಾವತಿಸಿಲ್ಲ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್‌ ಮಲ್ಯ ಸೇರಿ ಹತ್ತು ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ವಿಜಯ್‌ ಮಲ್ಯಗೆ ಜಾಮೀನು ರಹಿತ ವಾರೆಂಟ್‌ ನೀಡಿದ್ದಾರೆ ಹಾಗೂ ಆರೋಪಿಗಳಿಗೆ ಸಮನ್ಸ್‌ ನೀಡಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಷ್ಟ್ರಕವಿ ಕುವೆಂಪು ಕಟ್ಟಿದ ಸಂವಿಧಾನ ಸ್ವಾಗತ ಗೀತೆ

ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ…

10 mins ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂಚಲನ ಮೂಡಿಸಿದ ಬಿಜೆಪಿ-ಜಾ.ದಳ ಮೈತ್ರಿ ವಿಚಾರ

ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ  ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…

24 mins ago

ಆಟಿಕೆ ಮಾರಾಟಗಾರರ ಸುರಕ್ಷತೆಗೆ ಸರ್ಕಾರಗಳು ಮುಂದಾಗಲಿ

2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…

1 hour ago

ಕ್ರೀಡಾಲೋಕದ ಸಿಹಿ-ಕಹಿ ಮೆಲುಕು

ಹೊಸ ವರ್ಷದ ಹೊಸ್ತಿಲಲ್ಲಿರುವ ನಾವು 2025ರ ವರ್ಷಪೂರ್ತಿ ಸುಂದರ ಹಾಗೂ ಕಹಿ ಘಟನೆಗಳನ್ನು ಮೆಲುಕು ಹಾಕಿದ್ದು. ಅದೇ ಮಾದರಿಯಲ್ಲಿ ಪ್ರಸಕ್ತ…

2 hours ago

ಕೊಡಗು ಜಿಲ್ಲೆಯಲ್ಲಿ ಹೆಚ್ಚಿದ ಮಂಗಗಳ ಕಾಟ

* ರೈತರ ಕೈಗೆ ಸಿಗದ ಫಸಲು * ಸ್ಥಳಾಂತರಕ್ಕೆ  ಅನುಮತಿ ನೀಡಲು ಅರಣ್ಯ ಇಲಾಖೆಯಿಂದ ಮನವಿ * ವಾನರ ಸೇನೆ…

2 hours ago

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

5 hours ago