ಕದನ ವಿರಾಮ ಘೋಷಣೆ | ಅಮೆರಿಕಾ ಮಾತುಕತೆಗೆ ಭಾರತದ ಸ್ಪಷ್ಟ ಸಂದೇಶವೇನು?

ಹೊಸದಿಲ್ಲಿ : ಕಾಶ್ಮೀರದ ಬಗ್ಗೆ ಭಾರತ ಸ್ಪಷ್ಟ ನಿಲುವು ಹೊಂದಿದೆ. ಪಾಕ್‌ ಆಕ್ರಮಿತ ಕಾಶ್ಮೀರ ಹಿಂಪಡೆಯುವುದು ಹಾಗೂ ಉಗ್ರರ ಹಸ್ತಾಂತರದ ಕುರಿತಾಗಿ ಮಾತ್ರವೇ ಮಾತುಕತೆ ನಡೆಸಲಾಗುವುದು ಎಂದು ಅಮೆರಿಕಾಕ್ಕೆ ಭಾರತ ಸ್ಪಷ್ಟ ಸಂದೇಶ ನೀಡಿದೆ.

ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕ ಭಾರತ-ಪಾಕಿಸ್ತಾನದ ಯುದ್ಧದ ಆತಂಕ ದೂರವಾಗಿದೆ. ಆದಾಗ್ಯೂ ಗಡಿಯಲ್ಲಿ ಪಾಕ್‌ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದೆ.

ಈ ನಡುವೆ ಅಮೆರಿಕಾ ಉಪಾಧ್ಯಕ್ಷ ಜೆ.ಡಿ ವ್ಯಾವ್ಸ್‌ ಜೊತೆ ಪ್ರಧಾನಿ ಮೋದಿ ಫೋನ್‌ ಮೂಲಕ ಮಾತುಕತೆ ನಡೆಸಿದ್ದು, ಭಾರತದ ಸ್ಪಷ್ಟತೆಯನ್ನು ಪ್ರತಿಪಾದಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಈಗ ಮಾತನಾಡಲು ಬೇರೆ ಏನು ಉಳಿದಿಲ್ಲ. ಪಾಕ್‌ ಭಯೋತ್ಪಾದಕರನ್ನು ಹಸ್ತಾಂತರಿಸುವುದು ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರವನ್ನು ಹಿಂಪಡೆಯುವುದರ ಬಗ್ಗೆ ಮಾತನಾಡಿದ್ರೆ ಮಾತ್ರ ನಾವು ಸಹ ಮಾತನಾಡುವುದು. ನಮಗೆ ಬೇರೆ ವಿಷಯದ ಉದ್ದೇಶವಲ್ಲ. ಜೊತೆಗೆ ನಮಗೆ ಯಾರ ಮಧ್ಯಸ್ಥಿಕೆಯನ್ನು ಬಯಸಲ್ಲ ಎಂದು ಸ್ಪಷ್ಟವಾಗಿ ಭಾರತ ಪ್ರತಿಪಾದಿಸಿದೆ.

ಈ ಮೂಲಕ ಭಯೋತ್ಪಾದನೆ ವಿರುದ್ಧ ಭಾರತ ರಾಜಿಯಾಗುವುದಿಲ್ಲ. ಪಾಕ್‌ ದಾಳಿ ಮಾಡಿದರೆ ತಕ್ಕಂತೆ ಪ್ರತೀದಾಳಿ ಮಾಡುತ್ತೇವೆ ಎಂಬ ಸ್ಷಷ್ಟ ಸಂದೇಶ ರವಾನಿಸಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

59 mins ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

1 hour ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

3 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

3 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

3 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

3 hours ago