ನವದೆಹಲಿ: ಭಾರತ ಮತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಇಂದು ಉಭಯ ರಾಷ್ಟ್ರಗಳ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕರ ಸಭೆ ನಡೆಯಲಿದೆ.
ಇಂದು ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದ್ದು, ಮಹತ್ವದ ಚರ್ಚೆಗಳಾಗುವ ಸಾಧ್ಯತೆಗಳಿವೆ. ಭಾರತ ಡಿಜಿಎಂಒ ಹಾಗೂ ಲೆಫ್ಟಿನೆಂಟ್ ಜನರಲ್, ಪಾಕ್‌ನ ಡಿಜಿಎಂಒ ಮೇಜರ್ ಜನರಲ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಮೇ.10ರಂದು ಅಮೇರಿಕಾ ಮಧ್ಯಸ್ಥಿಕೆ ಮೂಲಕ ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆಗೆ ಒಪ್ಪಿಗೆ ಸೂಚಿಸಿದ್ದವು. ಆ ಬಳಿಕವೂ ಪಾಕ್ ಸೇನೆ ಮತ್ತೆ ಜಮ್ಮು-ಕಾಶ್ಮೀರದಲ್ಲಿ ಡ್ರೋನ್ ದಾಳಿ ನಡೆಸಿತ್ತು.
ಇದಕ್ಕೆ ಪ್ರತ್ಯುತ್ತರ ನೀಡಿದ್ದ ಭಾರತೀಯ ಸೇನೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮುಂದುವರಿಸಿ ತಕ್ಕ ಉತ್ತರ ನೀಡಿತ್ತು. ಈ ಮಧ್ಯೆ ನಿನ್ನೆಯಿಂದ ಪಾಕ್ ದಾಳಿ ನಿಲ್ಲಿಸಿದ್ದು, ಇಂದು ಉಭಯ ದೇಶಗಳ ನಡುವಿನ ಮಾತುಕತೆ ನಡೆಯಲಿದೆ. ಇಂದಿನ ಮಾತುಕತೆ ಬಳಿಕವೇ ಭಾರತ ಮುಂದಿನ ನಡೆ ನಿರ್ಧರಿಸಲಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…