ನವದೆಹಲಿ: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣಾ ಸಿದ್ಧತೆ ಮತ್ತು ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಶುಕ್ರವಾರ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಿತು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಚುನಾವಣಾ ಸಮಿತಿ ಸದಸ್ಯರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಸಮಿತಿ ಸದಸ್ಯರು ಇದ್ದರು.
ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ವಿರುದ್ಧ ಇಂಡಿಯ ಕೂಟ ಒಟ್ಟಾಗಿ ಹೋರಾಡುವ ಬಗ್ಗೆ ಚರ್ಚಿಸಲಾಯಿತು.
ಅಭ್ಯರ್ಥಿಗಳ ಆಯ್ಕೆಯನ್ನು ಶೀಘ್ರವೇ ಪೂರ್ಣಗೊಳಿಸುವ ಬಗ್ಗೆ ಸಮಾಲೋಚನೆ ನಡೆಸಲಾಯಿತು.