ಬೆಂಗಳೂರು: ಎರಡು ರಾಜ್ಯಗಳು ಮತ್ತು ವಿವಿಧ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆಗಳ ಕುರಿತು ಚರ್ಚಿಸಲು ಅ. 20 ಮತ್ತು 21ರಂದು ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ರಾಜ್ಯದಿಂದ ಸಮಿತಿ ಸದಸ್ಯರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಪಾಲ್ಗೊಳ್ಳಲಿದ್ದಾರೆ.
ಮಹಾರಾಷ್ಟ್ರದಲ್ಲಿ ನ. 20ರಂದು ಒಂದೇ ಹಂತದಲ್ಲಿ ಮತ್ತು ಜಾರ್ಖಂಡ್ ನಲ್ಲಿ ನ. 13 ಮತ್ತು 20ರಂದು 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇದಲ್ಲದೆ, ನ. 13ರಂದು ಕರ್ನಾಟಕದ ಮೂರು ಕ್ಷೇತ್ರಗಳು ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಮತ್ತು ಚುನಾವಣಾ ಸಿದ್ಧತೆ ಕುರಿತಂತೆ ಸಭೆಯಲ್ಲಿ ಮೊದಲ ಹಂತದ ಸಮಾಲೋಚನೆ ನಡೆಯಲಿದೆ. ಕಾಂಗ್ರೆಸ್ ಚುನಾವಣಾ ಸಮಿತಿಯಲ್ಲಿ ಕರ್ನಾಟಕದಿಂದ ಸಚಿವ ಕೆ.ಜೆ.ಜಾರ್ಜ್ ಮಾತ್ರ ಸದಸ್ಯರಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಇಂಡಿಯಾ ಕೂಟದಲ್ಲಿ ಕಣಕ್ಕಿಳಿಯುತ್ತಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಹಾಗೂ ಬಿಜೆಪಿ ಮೈತ್ರಿ ಸರ್ಕಾರವನ್ನು ಕೆಳಗಿಳಿಸಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ರಾಜ್ಯದ ಮೂರು ಕ್ಷೇತ್ರಗಳಲ್ಲಿ ಗೆಲ್ಲುವುದು ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯ ವಿಷಯವಾಗಿದೆ. ಹೀಗಾಗಿ ಎರಡು ದಿನಗಳ ಕಾಲ ನಡೆಯುವ ಸಭೆ ಅತ್ಯಂತ ಮಹತ್ವ ಪಡೆದಿದೆ.
ಮೈಸೂರು: ಮೈಸೂರಿನ ವಿಜ್ಞಾನ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಗರಿ ಸೇರ್ಪಡೆಯಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನ ತಾವರೆಕಟ್ಟೆ ಸಮೀಪ ನಿರ್ಮಿಸಿರುವ ಅತ್ಯಾಧುನಿಕ ಟಿಲ್ಟೆಡ್…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ಇದೀಗ ಸಿನಿಮಾ ರೂಪದಲ್ಲಿ ಬರಲಿದೆ ಎಂದು ವರದಿಯಾಗಿದೆ. ನವೆಂಬರ್…
ಹಾಸನ: ಈ ಬಾರಿಯ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ಬರೆದಿದೆ! ಒಟ್ಟು 30 ಲಕ್ಷದ 6 ಸಾವಿರ ಭಕ್ತರು…
ನವದೆಹಲಿ: ಯುಪಿಐ ಮೂಲಕ ಪಾವತಿ ಮಾಡುವವರಿಗೆ ಹಾಗೂ ವ್ಯಾಪಾರಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಯುಪಿಐ ವಹಿವಾಟುಗಳ ಮೇಲೆ ಮರ್ಚೆಂಟ್ ಡಿಸ್ಕೌಂಟ್ ರೇಟ್,…
ದಾವಣಗೆರೆ: ಕರ್ನಾಟಕದಲ್ಲಿ ಚಳಿಯ ಅನುಭವ ಹೆಚ್ಚುತ್ತಿದೆ. ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ 10.3 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದ್ದು, ರಾಜ್ಯದ ಬಯಲು ಪ್ರದೇಶಗಳಲ್ಲೇ…
ದಕ್ಷಿಣ ಬದರಿಕಾಶ್ರಮ ಎಂದೇ ಹೆಸರುವಾಸಿಯಾದ ಪಾಂಡವಪುರ ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಮೇಲುಕೋಟೆಗೆ ಪ್ರತಿ ದಿನವೂ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಬರುತ್ತಾರೆ.…