ಹೊಸದಿಲ್ಲಿ: ಕೇಂದ್ರ ಸರ್ಕಾರವು 2025ಕ್ಕೆ ದೇಶದ ಜನ ಸಂಖ್ಯೆಯ ಅಧಿಕೃತ ಸಮೀಕ್ಷೆಯಾದ ಜನಗಣತಿಯನ್ನು ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಜನಗಣತಿ ಪ್ರಕ್ರಿಯೆಯೂ 2025ರಲ್ಲಿ ಪ್ರಾರಂಭವಾಗಿ 2026 ರವರೆಗೆ ಮುಂದುವರೆಯಲಿದೆ. ಇದು ಮುಗಿದ ಬಳಿಕ ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ ಕೆಲಸ ಆರಂಭವಾಗಿ 2028ರಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಹಿನ್ನೆಲೆ, ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಆಗಲಿದೆ. ಆದರೆ, ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಈವರೆಗೂ ಸರ್ಕಾರ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
2021ರಲ್ಲಿ ನಡೆಯಬೇಕಿದ್ದ ಜನಗಣತಿ ಕೋವಿಡ್ ಕಾರಣದಿಂದ ಮುಂದೂಡಿಕೆಯಾಗಿತ್ತು. ಕ್ಷೇತ್ರ ಪುನರ್ ವಿಂಗಡಣೆಯೊಂದಿಗೆ ಮಹಿಳಾ ಮೀಸಲಾತಿ ಸಹ ಜಾರಿಗೆ ಬರಲಿದೆ.





