ದೇಶ- ವಿದೇಶ

ರಾಜಕಾರಣಕ್ಕಾಗಿ ಮಕ್ಕಳ ಬಳಕೆ: ಅರವಿಂದ್‌ ಕ್ರೇಜಿವಾಲ್‌ ವಿರುದ್ಧ ಬಿಜೆಪಿ ವಾಗ್ದಾಳಿ

ನವದೆಹಲಿ: ದೆಹಲಿಯ ಮುಗ್ಧ ಮಕ್ಕಳನ್ನು ಎಎಪಿ ತಮ್ಮ ರಾಜಕೀಯಕ್ಕಾಗಿ ಬಳಸಿಕೊಂಡು ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ದೆಹಲಿಯ ಮಾಜಿ ಸಿಎಂ ಅರವಿಂದ್‌ ಕ್ರೇಜಿವಾಲ್‌ ವಿರುದ್ಧ ಕೇಂದ್ರ ಬಿಜೆಪಿ ವಾಗ್ದಾಳಿ ನಡೆಸಿದೆ.

ದೆಹಲಿ ಚುನಾವಣೆಯೂ 2025ರ ಫೆಬ್ರವರಿ ತಿಂಗಳಿನಲ್ಲಿ ನಡೆಯಲಿದ್ದು, ಈ ವಿಧಾನಸಭೆ ಚುನಾವಣೆಯ ಸಂಬಂಧ ಎಎಪಿ ಬಗ್ಗೆ ಮಕ್ಕಳು ಹೇಳಿರುವ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಿಎಂ ಅರವಿಂದ್‌ ಕ್ರೇಜಿವಾಲ್‌ ಹಂಚಿಕೊಂಡಿರುವ ಬಗ್ಗೆ ಬಿಜೆಪಿ ಕಿಡಿಕಾರಿದೆ.

ಈ ಕುರಿತು ಜೆಪಿ ನಾಯಕ ಗೌರವ್‌ ಭಾಟಿಯಾ ಪ್ರತಿಕ್ರಿಯೆ ನೀಡಿದ್ದು, ಕೇಜ್ರಿವಾಲ್‌ ಅವರ ಈ ಪೋಸ್ಟ್‌ಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದೆ. ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಮಕ್ಕಳ ಹೇಳಿಕೆಗಳು, ಅವರ ಚಟುವಟಿಕೆಗಳನ್ನು ಚುನಾವಣೆಗೆ ಬಳಸಿಕೊಳ್ಳಬಾರದು. ಈ ತರಹ ಮಕ್ಕಳನ್ನು ಬಳಸಿಕೊಂಡರೆ ಬಾಲಾಪರಾಧಿ ಕಾಯಿದೆ 2015ರ ಉಲ್ಲಂಘನೆಯಾಗುತ್ತದೆ. ಇಷ್ಟೆಲ್ಲಾ ಆದರೂ ಇದುವರೆಗೂ ಅರವಿಂದ್‌ ಕೇಜ್ರಿವಾಲ್‌ ಹಾಗೂ ಅತಿಶಿ ಮಕ್ಕಳ ಹೇಳಿಕೆಯ ಪೋಸ್ಟ್‌ಗಳನ್ನು ತೆಗೆದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ: 66 ಮಂದಿ ದುರ್ಮರಣ

ಬೊಗೋಟಾ: 125 ಜನರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ವಿಮಾನವು ಟೇಕಾಫ್‌ ಕೆಲ ಸಮಯದಲ್ಲಿ ಪತನಗೊಂಡು 66 ಜನರು ಸಾವನ್ನಪ್ಪಿರುವ ಘಟನೆ ಕೊಲಂಬಿಯಾದಲ್ಲಿ…

20 mins ago

ಓದುಗರ ಪತ್ರ: ಕಲ್ಲಾಗದಿರು ಮಳೆಯೇ!

ಬಾ ಮಳೆಯೇ ಬಾ.. ನೊಂದು - ಬೆಂದು ಬಸವಳಿದ ರೈತನ ಬಾಳಿಗೆ ಹೂವಾಗಿ ಬಾ ಕಾದ ಭೂತಾಯ ಒಡಲಿಂಗೆ ಹನಿ…

55 mins ago

ಓದುಗರ ಪತ್ರ: ಬೆರಳಚ್ಚು ಕಡ್ಡಾಯಗೊಳ್ಳಲಿ

ಪಡಿತರ ಮತ್ತು ಪಿಂಚಣಿಗೆ ಬಯೋಮೆಟ್ರಿಕ್ ಕಡ್ಡಾಯವಿರುವಾಗ ಚುನಾವಣೆಯಲ್ಲಿ ಇದಕ್ಕೇಕೆ ವಿನಾಯಿತಿ? ಭಾರತದಂತಹ ವಿಶಾಲ ದೇಶದಲ್ಲಿ. ಶೇ.೨೦ ರಿಂದ ೨೨ ರಷ್ಟು…

57 mins ago

ಓದುಗರ ಪತ್ರ: ಒಂದನೇ ತರಗತಿ ಪ್ರವೇಶಕ್ಕೆ ಹಿಂದಿನ ಪದ್ಧತಿಯೇ ಸೂಕ್ತ

ಒಂದನೇ ತರಗತಿ ಪ್ರವೇಶಕ್ಕೆ ಜೂನ್ ೧ಕ್ಕೆ ೬ ವರ್ಷ ಕಡ್ಡಾಯಗೊಳಿಸಿರುವ ನಿಯಮವು, ಕೇವಲ ಕೆಲವೇ ದಿನಗಳ ಅಂತರವಿರುವ ಮಕ್ಕಳ ಒಂದು…

1 hour ago

ಓದುಗರ ಪತ್ರ: ಎಚ್.ಡಿ.ದೇವೇಗೌಡ ಪತ್ರ ಬರೆದಿರುವುದು ಶ್ಲಾಘನೀಯ

ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ನಡವಳಿಕೆಯನ್ನು ಕುರಿತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಇತ್ತೀಚೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ…

1 hour ago

ಓದುಗರ ಪತ್ರ: ರಜೆ ಸಮಯ ಮಕ್ಕಳಿಗೆ ಉಪಯುಕ್ತವಾಗಲಿ

ಬೇಸಿಗೆಯ ರಜೆ ಎಂದರೆ ಮಕ್ಕಳಿಗೆ ಸಂತೋಷದ ಕಾಲ. ಶಾಲೆಯ ಒತ್ತಡದಿಂದ ದೂರವಾಗಿ ಆಟ-ಪಾಠಗಳಲ್ಲಿ ತೊಡಗಿಸಿಕೊಳ್ಳುವ ಸಮಯ. ಆದರೆ ಇತ್ತೀಚಿನ ದಿನಗಳಲ್ಲಿ…

1 hour ago