Mysore
22
overcast clouds

Social Media

ಮಂಗಳವಾರ, 19 ಮೇ 2026
Light
Dark

ಕೇಂದ್ರ ಬಜೆಟ್‌ 2026: ದೇಶಾದ್ಯಂತ 500 ಹೊಸ ಜಲಾಶಯಗಳ ನಿರ್ಮಾಣಕ್ಕೆ ಯೋಜನೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ ಜಲಾಶಯಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ಮೀನುಗಾರಿಕೆ ಹಾಗೂ ಪಶುಸಂಗೋಪನೆ ಉತ್ತೇಜನಕ್ಕೆ ಹಲವು ಕ್ರಮ ಕೈಗೊಳ್ಳಲಾಗಿದ್ದು, ತೆಂಗಿನಕಾಯಿ ಉತ್ಪಾದನೆ ಹಾಗೂ ಸ್ಪರ್ಧಾತ್ಮಕತೆಗಾಗಿ ವಿಶೇಷ ಆದ್ಯತೆ ನೀಡಲಾಗುವುದು.

ಬೆಳೆಗಳು ಹೆಚ್ಚು ಇಳುವರಿ ಬರುವಂತೆ ಮಾಡಲು ಹೊಸ ತಳಿಗಳ ಅಭಿವೃದ್ಧಿ ಮಾಡಲಾಗುತ್ತದೆ. ಜೊತೆಗೆ ತೆಂಗಿನಕಾಯಿ, ಶ್ರೀಗಂಧ, ಗೋಡಂಬಿ ಬೆಳೆಗಳಿಗೆ ವಿಶೇಷ ಪ್ರೋತ್ಸಾಹ ನೀಡಲಾಗುತ್ತದೆ.

ಇನ್ನು ಮಹಿಳೆಯರಿಗಾಗಿ ಲಕ್‌ಪತಿ ದೀದಿ ಯೋಜನೆಗೆ ಇನ್ನಷ್ಟು ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗಿದ್ದು, ದಿನಸಿ ಅಂಗಡಿ ಆರಂಭಿಸುವ ಮಹಿಳೆಯರಿಗೆ ವಿಶೇಷ ಸಹಾಯಧನ ನೀಡಲಾಗುತ್ತದೆ. ಮಹಿಳೆಯರಿಗೆ SHE MART ಆರಂಭಿಸಲು ಕೇಂದ್ರ ಉತ್ತೇಜನ ನೀಡಲಿದೆ.

ದಿವ್ಯಾಂಗರಿಗೆ ವಿಶೇಷ ಯೋಜನೆ ಘೋಷಿಸಿದ ಕೇಂದ್ರ ಸರ್ಕಾರವು, ರಾಂಚಿ, ತೇಜ್‌ಪುರ್‌ನಲ್ಲಿ ಹೊಸ ನಿಮ್ಹಾನ್ಸ್‌ ಆಸ್ಪತ್ರೆಗೆ ಸ್ಥಾಪನೆಗೆ ಘೋಷಣೆ ಮಾಡಿದೆ.

 

 

 

Tags:
error: Content is protected !!