ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು ಕ್ರಮ ಕೈಗೊಳ್ಳಲಾಗಿದ್ದು, ಅವುಗಳು ಈ ಕೆಳಕಂಡಂತಿವೆ.
ಹೊಸದಾಗಿ ಹೂಡಿಕೆ ಮಾಡುವ ವಿದೇಶಿ ಕಂಪನಿಗಳಿಗೆ ಟ್ಯಾಕ್ಸ್ ಹಾಲಿಡೇ ಸಿಕ್ಕಿದ್ದು, ಡೇಟಾ ಸರ್ವೀಸ್ ಸೆಂಟರ್ ಕಂಪನಿಗಳಿಗೆ ಟ್ಯಾಕ್ಸ್ ವಿನಾಯಿತಿ ನೀಡಲಾಗಿದೆ.
ಮಾರ್ಚ್.31ರವರೆಗೆ ಆದಾಯ ತೆರಿಗೆ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ತೆರಿಗೆ ಪಾವತಿ ವಿಳಂಬಕ್ಕೆ ಶೇಕಡಾ.100ರಷ್ಟು ದಂಡ ವಿಧಿಸುವ ಪ್ರಸ್ತಾಪ ಮಾಡಲಾಗಿದೆ.
ಹೊಸ ಆದಾಯ ತೆರಿಗೆ ಕಾನೂನು ಜಾರಿಯಾಗಲಿದ್ದು, ಅಪಘಾತ ವಿಮೆ ಹಣಕ್ಕೆ ಯಾವುದೇ ತೆರಿಗೆ ಇಲ್ಲ. ಸಣ್ಣ ತೆರಿಗೆ ಪಾವತಿದಾರರಿಗೆ ಹೊಸ ಘೋಷಣೆ ಮಾಡಲಾಗಿದೆ.
ಇನ್ನು ಈ ವರ್ಷ ತೆರಿಗೆಯಿಂದ 28 ಲಕ್ಷ ಕೋಟಿ ಆದಾಯ ಬಂದಿದ್ದು, ತೆರಿಗೆ ವಂಚನೆಗೆ ಇನ್ನು ಮುಂದೆ ಶಿಕ್ಷೆಯಿಲ್ಲ ಬರೀ ದಂಡ ಅಂದರೆ ಶೇಕಡಾ 10ರಷ್ಟು ದಂಡ ವಿಧಿಸುವ ಪ್ರಸ್ತಾಪ ಮಾಡಲಾಗಿದೆ.
ವಿಮಾನಗಳ ಬಿಡಿಭಾಗಗಳ ಆಮದು ಸುಂಕ ಇಳಿಕೆ ಮಾಡಲಾಗಿದ್ದು, ಚರ್ಮೋತ್ಪನ್ನಗಳ ಮೇಲಿನ ಆಮದು ಸುಂಕವನ್ನೂ ಇಳಿಕೆ ಮಾಡಲಾಗಿದೆ. ಅಣುವಿದ್ಯುತ್ ಸ್ಥಾವರ ಪರಿಕರಗಳ ಆಮದು ಸುಂಕವನ್ನು ಇಳಿಕೆ ಮಾಡಲಾಗಿದೆ.
12 ಕ್ಯಾನ್ಸರ್ ಔಷಧಗಳಿಗೆ ತೆರಿಗೆ ವಿನಾಯಿತಿ ಮಾಡಲಾಗಿದ್ದು, ಏಳು ಅಪರೂಪದ ಕಾಯಿಲೆಗಳ ಔಷದಗಳ ಬೆಲೆ ಇಳಿಕೆ ಮಾಡಲಾಗಿದೆ.
ಇನ್ನು ಮದ್ಯಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಮದ್ಯದ ಬೆಲೆಯಲ್ಲಿ ಏರಿಕೆ ಮಾಡಲಾಗಿದ್ದು, ಸಿಗರೇಟ್ ಮೇಲಿನ ಸುಂಕ ಏರಿಕೆ ಮಾಡಲಾಗಿದೆ.
ಇನ್ನು ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ವರ್ಷದ ಆದಾಯ ತೆರಿಗೆ ಈ ಬಾರಿಯೂ ಮುಂದುವರಿಕೆ ಆಗಲಿದೆ.
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…
ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…