ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ನಲ್ಲಿ ಯಾವ ಯಾವ ವಸ್ತುಗಳ ಬೆಲೆ ಇಳಿಕೆಯಾಗಿವೆ ಎಂಬ ಮಾಹಿತಿ ಈ ಕೆಳಕಂಡಂತಿದೆ.
ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿ ಬಜೆಟ್‌ನಲ್ಲಿ ಹಲವು ವಸ್ತುಗಳ ಬೆಲೆಯನ್ನು ಇಳಿಕೆ ಮಾಡಲಾಗಿದೆ.
ಕಾರು, ಮೊಬೈಲ್, ಟಿವಿಯಂತಹ ಅನೇಕ ಉತ್ಪನ್ನಗಳ ಮೇಲಿನ ಕಸ್ಟಮ್ ಸುಂಕವನ್ನು ಕಡಿಮೆ ಮಾಡುವುದಾಗಿ ಘೋಷಣೆ ಮಾಡಲಾಗಿದೆ.
ಕ್ಯಾನ್ಸರ್ ಚಿಕಿತ್ಸೆಯಲ್ಲಿ ಬಳಸಲಾಗುವ 36 ಜೀವರಕ್ಷಕ ಔಷಧಿಗಳ ಮೂಲ ಸುಂಕವನ್ನು ಹಣಕಾಸು ಸಚಿವರು ಕಡಿತಗೊಳಿಸಿದ್ದಾರೆ.
ಇದರ ಜೊತೆಗೆ ಬಜೆಟ್‌ನಲ್ಲಿ ಸ್ವದೇಶಿ ಬಟ್ಟೆಗಳು, ಎಲೆಕ್ಟ್ರಿಕ್ ಕಾರುಗಳು, ಚರ್ಮದ ಉತ್ಪನ್ನಗಳು, ಎಲ್‌ಇಡಿ ಟಿವಿ ಬೆಲೆ, ಕ್ಯಾನ್ಸರ್ ಔಷಧಿ, ಮೊಬೈಲ್ ಹಾಗೂ ಮೊಬೈಲ್ ಬಿಡಿಭಾಗಗಳ ಬೆಲೆ ಇಳಿಕೆ ಮಾಡಲಾಗಿದೆ.