ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಎಲ್ಲಾ ಸಮುದಾಯಕ್ಕೂ ನ್ಯಾಯ ಸಿಕ್ಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಬಜೆಟ್ ಬಗ್ಗೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಯುವಕರು, ರೈತರು, ಮಹಿಳಾ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ.
ಮೂರನೇ ಬಾರಿಯೂ ಮೋದಿಯವರು ಪ್ರಧಾನಿಯಾಗಿರುವುದಕ್ಕೆ ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಪ್ರಶಂಸೆ ವ್ಯಕ್ತವಾಗಿದೆ. ನಾವು 10 ವರ್ಷಗಳ ಕಾಲ ಯಶಸ್ವಿ ಆಡಳಿತ ನೀಡಿದ್ದೇವೆ.
ದೇಶದಲ್ಲಿ ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಬಜೆಟ್‌ನಲ್ಲಿ ಎಲ್ಲಾ ಸಮುದಾಯಕ್ಕೂ ನ್ಯಾಯ ಒದಗಿರುವ ಕೆಲಸ ಮಾಡಿದ್ದೇವೆ. ಈ ಬಜೆಟ್‌ನಲ್ಲಿ ಸಾಮಾಜಿಕ ನ್ಯಾಯಕ್ಕೆ ಒತ್ತು ಕೊಡಲಾಗಿದೆ ಎಂದರು.
ಬಡತನದ ವಿರುದ್ಧ ಸರ್ಕಾರ ಪ್ರಬಲವಾಗಿ ಹೋರಾಟ ಮಾಡುತ್ತಿದೆ. ಇನ್ನು ದೇಶದ ಆರ್ಥಿಕತೆ ವೇಗದ ಗತಿಯಲ್ಲಿ ಸಾಗುತ್ತಿದ್ದು, ಹಣದುಬ್ಬರ ನಿಯಂತ್ರಿಸಲು ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ.
ದೇಶದ 20 ಕಡೆ ರೈಲ್ವೆ ಯೋಜನೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕೃಷಿ, ಕೈಗಾರಿಕೆ ಹಾಗೂ ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಬಡವರಿಗೆ ಮನೆಗಳನ್ನು ಕೂಡ ಹಂಚಲಾಗುತ್ತಿದೆ ಎಂದು ಕೇಂದ್ರ ಬಜೆಟ್ ಪರ ಬ್ಯಾಟ್ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಪ್ರಹ್ಲಾದ್ ಜೋಶಿ ಅವರು, ಬಜೆಟ್ ಬಗ್ಗೆ ವಿಪಕ್ಷಗಳು ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ. ಈ ಬಜೆಟ್ ಜನಸಾಮಾನ್ಯರಿಗೆ ಪೂರಕವಾದ ಬಜೆಟ್ ಆಗಿದೆ. ಅವರ ಆರೋಪಗಳಲ್ಲಿ ಯಾವುದೇ ಉರುಳಿಲ್ಲ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…