Mysore
21
overcast clouds
Light
Dark

ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಮನೆ ನಿರ್ಮಾಣ ಹಾಗೂ 300 ಕೋಟಿ ಉಚಿತ ಸೋಲಾರ್‌ ವಿದ್ಯುತ್‌

ನವದೆಹಲಿ: ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಿದ್ದು, ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಮನೆ ನಿರ್ಮಾಣಕ್ಕೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಲಾಗಿದೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಕೇಂದ್ರ ಬಜೆಟ್‌ ಮಂಡಿಸಿದ್ದು, ಬಡವರು ಹಾಗೂ ಮನೆ ಇಲ್ಲದವರಿಗೆ ಬಂಪರ್‌ ಆಫರ್‌ ನೀಡಿದ್ದಾರೆ.

ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಮನೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ನಗರಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಜೊತೆಗೆ ಬಡವರಿಗೆ ಮನೆ ನಿರ್ಮಾಣಕ್ಕೆ ನೆರವು ನೀಡಲಾಗಿದೆ.

ನಗರದಲ್ಲಿ ವಾಸಿಸುತ್ತಿರುವ ಬಡವರಿಗೆ 1 ಕೋಟಿ ಮನೆ ನಿರ್ಮಾಣಕ್ಕೆ ಯೋಜನೆ ಸಿದ್ಧಪಡಿಸಲಾಗಿದ್ದು, ಮನೆಗಳಲ್ಲಿ ಸೋಲಾರ್‌ ಬಳಕೆಗೆ ಉತ್ತೇಜನ ನೀಡಲು ಹೊಸ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.

ದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದು, 1 ಕೋಟಿ ಮನೆಗಳಿಗೆ 300 ಯುನಿಟ್‌ ಉಚಿತ ಸೋಲಾರ್‌ ವಿದ್ಯುತ್‌ ನೀಡಲಾಗುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಪಿಎಂ ಸೂರ್ಯಘರ್‌ ಮುಫ್ತಿ ಬಿಜಲಿ ಯೋಜನೆ ಮೂಲಕ ಉಚಿತ ವಿದ್ಯುತ್‌ ನೀಡಲು ಹೊಸ ಯೋಜನೆ ಜಾರಿ ಮಾಡಲಾಗಿದೆ.