ನವದೆಹಲಿ: ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ಎನ್‌ಡಿಎ ನೇತೃತ್ವದ ಕೇಂದ್ರ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್ ಮಂಡಿಸಿದ್ದು, ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಕೇಂದ್ರ ಬಜೆಟ್ ಮಂಡಿಸಿದ್ದು, ಬಡವರು ಹಾಗೂ ಮನೆ ಇಲ್ಲದವರಿಗೆ ಬಂಪರ್ ಆಫರ್ ನೀಡಿದ್ದಾರೆ.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ನಗರಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಜೊತೆಗೆ ಬಡವರಿಗೆ ಮನೆ ನಿರ್ಮಾಣಕ್ಕೆ ನೆರವು ನೀಡಲಾಗಿದೆ.
ನಗರದಲ್ಲಿ ವಾಸಿಸುತ್ತಿರುವ ಬಡವರಿಗೆ 1 ಕೋಟಿ ಮನೆ ನಿರ್ಮಾಣಕ್ಕೆ ಯೋಜನೆ ಸಿದ್ಧಪಡಿಸಲಾಗಿದ್ದು, ಮನೆಗಳಲ್ಲಿ ಸೋಲಾರ್ ಬಳಕೆಗೆ ಉತ್ತೇಜನ ನೀಡಲು ಹೊಸ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.
ದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದು, 1 ಕೋಟಿ ಮನೆಗಳಿಗೆ 300 ಯುನಿಟ್ ಉಚಿತ ಸೋಲಾರ್ ವಿದ್ಯುತ್ ನೀಡಲಾಗುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಪಿಎಂ ಸೂರ್ಯಘರ್ ಮುಫ್ತಿ ಬಿಜಲಿ ಯೋಜನೆ ಮೂಲಕ ಉಚಿತ ವಿದ್ಯುತ್ ನೀಡಲು ಹೊಸ ಯೋಜನೆ ಜಾರಿ ಮಾಡಲಾಗಿದೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…