ನವದೆಹಲಿ: ಸಂಸತ್ತಿನಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದು, ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಘೋಷಣೆ ಮಾಡಿದ್ದಾರೆ.
ದಾಖಲೆಯ ಸತತ 8ನೇ ಬಾರಿಗೆ ಬಜೆಟ್ ಮಂಡಿಸಿರುವ ನಿರ್ಮಲಾ ಸೀತಾರಾಮನ್ ಅವರು, ಕೃಷಿ ಕ್ಷೇತ್ರದ ಆಧುನೀಕರಣ ಹಾಗೂ ಸ್ವಾವಲಂಬನೆಯತ್ತ ಕೇಂದ್ರಿಕರಿಸಲಾಗಿದೆ ಎಂದು ತಿಳಿಸಿದರು.
ಈ ಯೋಜನೆಯ ಮೂಲಕ 1.7 ಕೋಟಿ ಕೃಷಿಕರಿಗೆ ಪ್ರಯೋಜನವಾಗಲಿದ್ದು, ಕಡಿಮೆ ಇಳುವರಿಯ 100 ಜಿಲ್ಲೆಗಳು ಇದರಲ್ಲಿ ಒಳಗೊಂಡಿರಲಿದೆ ಎಂದು ತಿಳಿಸಿದ್ದಾರೆ.
ಇನ್ನು ತರಕಾರಿ, ಹಣ್ಣುಗಳ ಉತ್ಪಾದನೆ ಮತ್ತು ಲಾಭದಾಯಕ ಬೆಲೆ ಒದಗಿಸುವ ಸಮಗ್ರ ಕಾರ್ಯಕ್ರಮವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.