ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದು, ಇದು ಕುರ್ಚಿ ಬಚಾವೋ ಬಜೆಟ್ ಎಂದು ಕಿಡಿಕಾರಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದು, ಇಂದು ಮೂರನೇ ಅವಧಿಯ ಮೊದಲ ಬಜೆಟ್ ಮಂಡಿಸಿದೆ.
ಬಜೆಟ್‌ನಲ್ಲಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಅನ್ಯಾಯವಾಗಿದೆ ಎಂದು ಇಂಡಿಯಾ ಮೈತ್ರಿಕೂಟ ಆರೋಪಿಸಿದೆ.
ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು, ಇದು ಕುರ್ಚಿ ಬಚಾವೋ ಬಜೆಟ್ ಎಂದು ವ್ಯಂಗ್ಯವಾಡಿದ್ದಾರೆ.
ಆಂಧ್ರಪ್ರದೇಶ ಹಾಗೂ ಬಿಹಾರ ರಾಜ್ಯಗಳಿಗೆ ಮಾತ್ರ ವಿಶೇಷ ಅನುದಾನ ನೀಡಲಾಗಿದ್ದು, ಎನ್‌ಡಿಎ ಮೈತ್ರಿಕೂಟ ಓಲೈಸಲು ಈ ಬಜೆಟ್ ಮಂಡನೆ ಮಾಡಲಾಗಿದೆ. ಆದರೆ ಇಂಡಿಯಾ ಮೈತ್ರಿಕೂಟವಿರುವ ರಾಜ್ಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ರಾಹುಲ್ ಗಾಂಧಿ ಅವರು, ಬಜೆಟ್‌ನಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಕಾಪಿ ಮಾಡಿದ್ದಾರೆ. ನಾವು ಚುನಾವಣೆ ವೇಳೆ ಘೋಷಣೆ ಮಾಡಿದ ಪ್ರಣಾಳಿಕೆಯನ್ನೇ ಬಜೆಟ್ ಆಗಿ ಪರಿವರ್ತನೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿ ಕಾರಿದರು.





