ನವದೆಹಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಹುಟ್ಟಿದ ದಿನ ಏ.14 ರಂದು ಭಾರತದಾದ್ಯಂತ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಘೋಷಣೆ ಮಾಡಿದ್ದಾರೆ.
ಸಮಾನತೆಯ ಹರಿಕಾರ, ಸಮಾಜದಲ್ಲಿ ಹೊಸ ಯುಗ ಸ್ಥಾಪಿಸಿದ ಡಾ.ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನದಂದು ಸಾರ್ವಜನಿಕ ರಜೆ ಇರುತ್ತದೆ. ಈ ನಿರ್ಧಾರ ತೆಗೆದುಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಭಾವನೆಗಳನ್ನು ಗೌರವಿಸಿದ್ದಾರೆ ಎಂದು ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಕುರಿತಂತೆ ಭಾರತದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು ಏ.14 ರಂದು ಮುಚ್ಚಲಿವೆ. ಇದಕ್ಕೆ ಸಂಬಂಧಪಟ್ಟ ಎಲ್ಲರಿಗೂ ತಿಳಿಸಲು ಭಾರತ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಾಲಿಗ್ರಾಮ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಜಿಲ್ಲಾ ಸಂಚಾಲಕ ಚಂದ್ರು ಆರೋಪ ಸಾಲಿಗ್ರಾಮ: ದಲಿತ ಮತ್ತು ಹಿಂದುಳಿದ…
ಕೃಷ್ಣ ಸಿದ್ದಾಪುರ ಸಂತೆಮಾಳದಲ್ಲಿ ತರಕಾರಿ ಜೊತೆ ಸಾಂಕ್ರಾಮಿಕ ರೋಗವೂ ಉಚಿತ ಕ್ರಮಕೈಗೊಳ್ಳದ ಗ್ರಾ.ಪಂ. ವಿರುದ್ಧ ಸಾರ್ವಜನಿಕರ ಅಸಮಾಧಾನ ಸಿದ್ದಾಪುರ: ಸಾರ್ವಜನಿಕ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಘನತೆಯ ಬದುಕು ಬಯಸುವ ಮನುಷ್ಯನ ಹಕ್ಕನ್ನು ಎತ್ತಿ ಹಿಡಿದಿರುವ ಸಿಎಂ ಸಿದ್ದರಾಮಯ್ಯ ಬ್ರಿಟಿಷರ ಗುಲಾಮಗಿರಿಯಲ್ಲಿದ್ದ ಭಾರತಕ್ಕೆ…
ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಘರ್ಷಣೆ ಸಂದರ್ಭದಲ್ಲಿ ಗುಂಡೇಟಿನಿಂದ ಕಾಂಗ್ರೆಸ್ ಕಾರ್ಯಕರ್ತ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿವಿ ಅಶೋಕಪುರಂ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ ೨,೦೦೦ ಇದ್ದ…