Central government approves bike taxi service
ನವದೆಹಲಿ: ರಾಜ್ಯದಲ್ಲಿ ನಿಷೇಧ ಹೇರಲಾಗಿರುವ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಕುತೂಹಲ ಕೆರಳಿಸಿದೆ.
ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಖಾಸಗಿ ಬೈಕ್‍ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ಆದರೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿರುವುದು ಕುತೂಹಲ ಕೆರಳಿಸಿದೆ.
ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರಗಳು ಖಾಸಗಿ ಬೈಕ್‍ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್‌ಗಳಿಗೆ ಅನುಮತಿ ಕೊಡಬಹುದು. ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು ಎಂದು ಸೂಚಿಸಿದೆ.
ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಸಬ್ ಸೆಕ್ಷನ್ (3)ರ ಅಡಿಯಲ್ಲಿ ಅಗ್ರಿಗೇಟರ್‌ಗಳಿಗೆ ಖಾಸಗಿ ವಾಹನಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು ಇದರಡಿ ಅಗ್ರಿಗೇಟರ್‌ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದಾಗಿದೆ.
ಕೇಂದ್ರ ಸರ್ಕಾರದ ಈ ಆದೇಶ ಬೆನ್ನಲ್ಲೇ ಬೈಕ್ ಟ್ಯಾಕ್ಸಿ ಅನುಮತಿಗಾಗಿ ಹೋರಾಟದ ಹಾದಿ ಹಿಡಿದಿದ್ದವರಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…