ದೇಶ- ವಿದೇಶ

ರಾಜ್ಯದಲ್ಲಿ ನಿಷೇಧ ಹೇರಿರುವ ಬೈಕ್‌ ಟ್ಯಾಕ್ಸಿ ಸೇವೆಗೆ ಕೇಂದ್ರ ಅನುಮತಿ

ನವದೆಹಲಿ: ರಾಜ್ಯದಲ್ಲಿ ನಿಷೇಧ ಹೇರಲಾಗಿರುವ ಬೈಕ್ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಕುತೂಹಲ ಕೆರಳಿಸಿದೆ.

ಬೈಕ್ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಖಾಸಗಿ ಬೈಕ್‍ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ಆದರೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿರುವುದು ಕುತೂಹಲ ಕೆರಳಿಸಿದೆ.

ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರಗಳು ಖಾಸಗಿ ಬೈಕ್‍ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್‌ಗಳಿಗೆ ಅನುಮತಿ ಕೊಡಬಹುದು. ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು ಎಂದು ಸೂಚಿಸಿದೆ.

ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಸಬ್ ಸೆಕ್ಷನ್ (3)ರ ಅಡಿಯಲ್ಲಿ ಅಗ್ರಿಗೇಟರ್‌ಗಳಿಗೆ ಖಾಸಗಿ ವಾಹನಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು ಇದರಡಿ ಅಗ್ರಿಗೇಟರ್‌ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ ವಿಧಿಸಬಹುದಾಗಿದೆ.

ಕೇಂದ್ರ ಸರ್ಕಾರದ ಈ ಆದೇಶ ಬೆನ್ನಲ್ಲೇ ಬೈಕ್ ಟ್ಯಾಕ್ಸಿ ಅನುಮತಿಗಾಗಿ ಹೋರಾಟದ ಹಾದಿ ಹಿಡಿದಿದ್ದವರಿಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

3 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

5 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago