ದೇಶ- ವಿದೇಶ

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಚರ್ಚೆ ನಡೆಸಿದ ಫಲವಾಗಿ ಕೇಂದ್ರ ಸರಕಾರ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಿದೆ.

ವಾತಾವರಣ ವೈಪರಿತ್ಯ ಮತ್ತು ಬೆಲೆ ಕುಸಿತದಿಂದ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದ ಮಾವು ಬೆಳೆಗಾರರಿಗೆ ನೆರವಿನ ಹಸ್ತ ಚಾಚಿರುವ ಕೇಂದ್ರವು, ಮಾರುಕಟ್ಟೆ ಹಸ್ತಕ್ಷೇಪ ಯೋಜನೆ ಅಡಿಯಲ್ಲಿ 1.30 ಲಕ್ಷ ಮೆಟ್ರಿಕ್‌ ಟನ್‌ ಮಾವಿಗೆ ಪ್ರತಿ ಕ್ವಿಂಟಲ್‌ಗೆ 1,750 ನೆರವು ಘೋಷಿಸಿದೆ.

ಈ ಸಂಬಂಧ ಸಚಿವ ಕುಮಾರಸ್ವಾಮಿ ಅವರು ನವದೆಹಲಿಯಲ್ಲಿ ಬುಧವಾರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ತ್ವರಿತವಾಗಿ ಮಾವು ಬೆಳೆಗಾರರ ರಕ್ಷಣೆಗೆ ಧಾವಿಸಬೇಕು ಎಂದು ಮನವಿ ಮಾಡಿದ್ದರು. ಕುಮಾರಸ್ವಾಮಿ ಅವರು ಮನವಿಗೆ ಸ್ಪಂದಿಸಿದ್ದ ಚೌಹಾಣ್ ಅವರು, ಮಾವು ಬೆಳೆಗಾರರಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ.

ಅಲ್ಲದೆ, ಇದೇ ಜೂನ್ 17ರಂದು ಸಚಿವ ಚೌಹಾಣ್ ಅವರಿಗೆ ಪತ್ರ ಬರೆದಿದ್ದ ಬೃಹತ್ ಕೈಗಾರಿಕೆ ಸಚಿವರು, ಮಾವು ಬೆಳೆಗಾರರ ನೆರವಿಗೆ ಬರುವಂತೆ ಕೋರಿದರು. ಬೆಲೆ ಕೊರತೆ ಪಾವತಿ ಯೋಜನೆ (PDPS)ಯಡಿ ನೆರವಾಗುವಂತೆ ಕೇಳಿದ್ದರು. ತದನಂತರ ಕೋಲಾರ ಜಿಲ್ಲೆಯಲ್ಲಿ ಮಾವು ಬೆಳೆಗಾರರು ಪ್ರತಿಭಟನೆ ಶುರು ಮಾಡುತ್ತಿದ್ದಂತೆಯೇ ತುರ್ತಾಗಿ ಬುಧವಾರ ಸಂಜೆ ಕೃಷಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಅದರ ಫಲವಾಗಿ ಆರ್ಥಿಕ ನೆರವಿನ ಘೋಷಣೆ ಹೊರಬಿದ್ದಿದೆ. ಕೇಂದ್ರ ಸರ್ಕಾರದ ಈ ಉಪಕ್ರಮದ ಮೂಲಕ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ತುಮಕೂರು, ಮಂಡ್ಯ ಸೇರಿದಂತೆ ವಿವಿಧ ಜಿಲ್ಲೆಗಳ ಮಾವು ಬೆಳೆಗಾರರಿಗೆ ನೆರವಾಗಲಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

2 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

2 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದತಿಗಿಂತ ‘ಶುದ್ಧೀಕರಣ’ ತುರ್ತು ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…

2 hours ago

ಆರೋಗ್ಯಕರ ನಾಳೆಗಾಗಿ ಆಯುರ್ವೇದ – ಒಂದು ಆರೋಗ್ಯ, ಒಂದು ಭವಿಷ್ಯ

ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…

2 hours ago

ಡಾ.ಎಸ್.ಜೆ. ನಾಗಲೋಟಿಮಠ ಅವರ ಸ್ಛೂರ್ತಿದಾಯಕ ನಡವಳಿಕೆ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ…

2 hours ago

ಯುವನಿಧಿ; ೨,೧೭೯ ಮಂದಿಗೆ ೬.೩೦ ಕೋಟಿ ರೂ. ನೆರವು

ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ  ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…

2 hours ago