ಹೊಸದಿಲ್ಲಿ: ಇತಿಹಾಸ ಪ್ರಸಿದ್ದ ಕೇರಳದ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ತೆರಳುವ ಭಕ್ತರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಿಮಾನದಲ್ಲಿ ಇರುಮುಡಿ ತೆಗೆದುಕೊಂಡು ಹೋಗಲು ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಅನುಮತಿ ನೀಡಿದೆ. ಈ ಆದೇಶವು 2025ರ ಜನವರಿ 20ರವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.
ಇಷ್ಟು ದಿನ ಅಯ್ಯಪ್ಪ ಸ್ವಾಮಿ ಭಕ್ತರು ಬರೀ ಕಾರು, ಬಸ್, ರೈಲುಗಳಲ್ಲೇ ಪ್ರಯಾಣ ಮಾಡುತ್ತಿದ್ದರು. ಇರುಮುಡಿ ಕಟ್ಟು ತೆಗೆದುಕೊಂಡು ವಿಮಾನದಲ್ಲಿ ಹೋಗಲು ಅವರಿಗೆ ಅವಕಾಶ ಇರಲಿಲ್ಲ. ಆದರೆ, ಈಗ ಕೇಂದ್ರ ಸರ್ಕಾರವೂ ಇರುಮುಡಿಯನ್ನು ವಿಮಾನ ಕ್ಯಾಬಿನ್‍ನಲ್ಲಿ ತೆಗೆದುಕೊಂಡು ಹೋಗಲು ಅವಕಾಶ ನೀಡಿದೆ. ಹೀಗಾಗಿ ಇನ್ನು ಇರುಮುಡಿ ಸಮೇತ ಅಯ್ಯಪ್ಪ ಭಕ್ತರು ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಚೆಕ್ ಇನ್ ಬ್ಯಾಗೇಜ್ ಬದಲು ಅಯ್ಯಪ್ಪ ಭಕ್ತರು ಇರುಮುಡಿ ತೆಗೆದುಕೊಂಡು ಹೋಗಬಹುದು. ಈ ವೇಳೆ ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ಮಾಡಲಾಗುತ್ತದೆ.
ಕಳೆದ ವರ್ಷ ಏಕಾಏಕಿ ಲಕ್ಷಾಂತರ ಭಕ್ತರು ಅಯ್ಯಪ್ಪ ದರ್ಶನಕ್ಕೆ ಆಗಮಿಸಿದ್ದರಿಂದ ಮತ್ತು ಅದನ್ನು ನಿರ್ವಹಿಸಲು ಸರ್ಕಾರ ಸೂಕ್ತ ವ್ಯವಸ್ಥೆ ಮಾಡಿಕೊಂಡಿರದ ಕಾರಣ ಭಾರೀ ಅವ್ಯವಸ್ಥೆ ಉಂಟಾಗಿತ್ತು. ಹೀಗಾಗಿ ಪ್ರಸಿದ್ದ ಶಬರಿಮಲೆ ದೇಗುಲದ ವಾರ್ಷಿಕ ಮಂಡಲಂ- ಮಕರವಿಳಕ್ಕು ಯಾತ್ರೆಗೆ ಈ ವರ್ಷ ಆನ್‍ಲೈನ್‍ನಲ್ಲಿ ಬುಕ್ ಮಾಡಿದವರಿಗೆ ಮಾತ್ರ ಶಬರಿಮಲೆಗೆ ಪ್ರವೇಶ ನೀಡಲು ಕೇರಳ ಸರ್ಕಾರ ನಿರ್ಧರಿಸಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಆನ್‍ಲೈನ್ ಬುಕ್ಕಿಂಗ್ ಹಿಂಪಡೆದಿತ್ತು.
ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹಮ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ…
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…