ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯವು ಇತ್ತೀಚಿಗೆ ಏಕೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು(CPPO) ಜಾರಿ ಮಾಡಿದೆ. ಈ ವ್ಯವಸ್ಥೆಯ ಮೂಲಕ ಪಿಂಚಣಿದಾರರು ದೇಶದ ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ ಶಾಖೆಯಲ್ಲಿ ತಮ್ಮ ಪಿಂಚಣಿಯನ್ನು ಪಡೆಯಬಹುದಾಗಿದೆ.
ಈ ವ್ಯವಸ್ಥೆಯಿಂದ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ವ್ಯಾಪ್ತಿಗೆ ಬರುವ 68 ಲಕ್ಷ ಪಿಂಚಣಿದಾರರಿಗೆ ಉಪಯೋಗವಾಗಲಿದೆ.
ಪಿಂಚಣಿದಾರರು ಪಿಂಚಣಿ ಪರಿಶೀಲನೆಗಾಗಿ ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಆಗತ್ಯವಿಲ್ಲ. ಪಿಂಚಣಿ ಮೊತ್ತ ನೇರವಾಗಿ ತಮ್ಮ ಖಾತೆಗೆ ಜಮೆಯಾಗಲಿದೆ. ಪಿಂಚಣಿದಾರರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರವಾದರೂ ಬ್ರಾಂಚ್ ಬದಲಿಸುವ ಆಗತ್ಯವಿಲ್ಲ. ಅದಕ್ಕೆ ಬದಲಾಗಿ ದೇಶದ ಯಾವುದೇ ಬ್ಯಾಂಕ್ ಶಾಖೆಯಿಂದ ಹಣ ಪಡೆಯಬಹುದು.
ಈ ವ್ಯವಸ್ಥೆ ಜಾರಿಗೂ ಮುನ್ನ 1995ರ ಉದ್ಯೋಗಿಗಳ ಪಿಂಚಣಿ ಯೋಜನೆಯಡಿ ವಿಕೇಂದ್ರಿಕೃತ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿತ್ತು. ಅದರಲ್ಲಿ ಪ್ರತಿ ವಲಯ ಅಥವಾ ಪ್ರಾಂತ್ಯದ ಇಪಿಎಫ್‌ಒ ಕಚೇರಿಗಳು 3-4 ಬ್ಯಾಂಕ್‌ಗಳೊಂದಿಗೆ ಪ್ರತ್ಯೇಕ ಒಪ್ಪಂದ ಹೊಂದಿದ್ದವು. ಅವುಗಳ ಮೂಲಕವೇ ಹಣ ಪಡೆಯಬೇಕಿತ್ತು.



