ದೇಶ- ವಿದೇಶ

ಪಿಂಚಣಿದಾರರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಕಾರ್ಮಿಕ ಸಚಿವಾಲಯ

ನವದೆಹಲಿ: ಕೇಂದ್ರ ಕಾರ್ಮಿಕ ಸಚಿವಾಲಯವು ಇತ್ತೀಚಿಗೆ ಏಕೀಕೃತ ಪಿಂಚಣಿ ಪಾವತಿ ವ್ಯವಸ್ಥೆಯನ್ನು(CPPO) ಜಾರಿ ಮಾಡಿದೆ. ಈ ವ್ಯವಸ್ಥೆಯ ಮೂಲಕ ಪಿಂಚಣಿದಾರರು ದೇಶದ ಯಾವುದೇ ರಾಜ್ಯದ, ಯಾವುದೇ ಬ್ಯಾಂಕಿನ ಶಾಖೆಯಲ್ಲಿ ತಮ್ಮ ಪಿಂಚಣಿಯನ್ನು ಪಡೆಯಬಹುದಾಗಿದೆ.

ಈ ವ್ಯವಸ್ಥೆಯಿಂದ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ವ್ಯಾಪ್ತಿಗೆ ಬರುವ 68 ಲಕ್ಷ ಪಿಂಚಣಿದಾರರಿಗೆ ಉಪಯೋಗವಾಗಲಿದೆ.

ಪಿಂಚಣಿದಾರರು ಪಿಂಚಣಿ ಪರಿಶೀಲನೆಗಾಗಿ ಬ್ಯಾಂಕ್‌ ಶಾಖೆಗೆ ಭೇಟಿ ನೀಡುವ ಆಗತ್ಯವಿಲ್ಲ. ಪಿಂಚಣಿ ಮೊತ್ತ ನೇರವಾಗಿ ತಮ್ಮ ಖಾತೆಗೆ ಜಮೆಯಾಗಲಿದೆ. ಪಿಂಚಣಿದಾರರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರವಾದರೂ ಬ್ರಾಂಚ್‌ ಬದಲಿಸುವ ಆಗತ್ಯವಿಲ್ಲ. ಅದಕ್ಕೆ ಬದಲಾಗಿ ದೇಶದ ಯಾವುದೇ ಬ್ಯಾಂಕ್‌ ಶಾಖೆಯಿಂದ ಹಣ ಪಡೆಯಬಹುದು.

ಈ ವ್ಯವಸ್ಥೆ ಜಾರಿಗೂ ಮುನ್ನ 1995ರ ಉದ್ಯೋಗಿಗಳ ಪಿಂಚಣಿ ಯೋಜನೆಯಡಿ ವಿಕೇಂದ್ರಿಕೃತ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿತ್ತು. ಅದರಲ್ಲಿ ಪ್ರತಿ ವಲಯ ಅಥವಾ ಪ್ರಾಂತ್ಯದ ಇಪಿಎಫ್‌ಒ ಕಚೇರಿಗಳು 3-4 ಬ್ಯಾಂಕ್‌ಗಳೊಂದಿಗೆ ಪ್ರತ್ಯೇಕ ಒಪ್ಪಂದ ಹೊಂದಿದ್ದವು. ಅವುಗಳ ಮೂಲಕವೇ ಹಣ ಪಡೆಯಬೇಕಿತ್ತು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

4 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

5 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

9 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

11 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

12 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

13 hours ago