ವಯನಾಡ್: ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾಶಗೊಳಿಸುವ ಕೆಲಸ ಮಾಡುತ್ತಿದೆ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಕೇರಳದಲ್ಲಿ ಬೂತ್ ಮಟ್ಟದ ಕಾಂಗ್ರೆಸ್ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಂವಿಧಾನ ನಾಶಗೊಳಿಸಲು ಎಲ್ಲಾ ಕಡೆಯಿಂದ ಪ್ರಯತ್ನ ನಡೆಸಲಾಗುತ್ತಿದೆ. ಇಂದು ನಾವು ದೇಶದ ಮೂಲ ಸತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡುವ ಅವಶ್ಯಕತೆ ಇದೆ ಎಂದು ಹೇಳಿದರು.
ವಯನಾಡ್‌ನಲ್ಲಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷದ ಕುರಿತು ಮಾತನಾಡಿ, ಸುಧಾರಿತ ರಕ್ಷಣಾ ಕ್ರಮ ತೆಗೆದುಕೊಳ್ಳಲು ಹೆಚ್ಚಿನ ಹಣ ಬಿಡುಗಡೆ ಮಾಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಪತ್ರ ಬರೆಯಲಾಗಿದೆ. ಅಲ್ಲದೇ, ಅರಣ್ಯ ಸಿಬ್ಬಂದಿ ಸೇರಿ ಕಾಡಿನಲ್ಲಿ ಕೆಲಸ ಮಾಡುವ ಎಲ್ಲರಿಗೂ ಹೆಚ್ಚಿನ ಭದ್ರತೆ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.





