ದೇಶ- ವಿದೇಶ

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ಆಧಾರ್ ದೃಢೀಕರಣವನ್ನು (ಇ-ಕೆವೈಸಿ) ಕಡ್ಡಾಯಗೊಳಿಸಿದೆ.

ಎಲ್ಲಾ ಎಲ್‌ಪಿಜಿ ಗ್ರಾಹಕರು ಬಯೋಮೆಟ್ರಿಕ್ ಆಧಾರ್ ಆಥೆಂಟಿಕೇಶನ್ (ಇ-ಕೆವೈಸಿ) ಪೂರ್ಣಗೊಳಿಸಬೇಕು. ಇದನ್ನು ಮನೆಯಲ್ಲೇ ತೈಲ ಮಾರುಕಟ್ಟೆ ಕಂಪನಿಗಳ ಮೊಬೈಲ್ ಅಪ್ಲಿಕೇಶನ್ ಮತ್ತು ಆಧಾರ್ ಫೇಸ್‌ಆರ್‌ಡಿ ಅಪ್ ಬಳಸಿ ಮಾಡಬಹುದು ಎಂದು ಸಚಿವಾಲಯವು ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ತಿಳಿಸಿದೆ.

ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ (ಪಿಎಂಯುವೈ) ಸಬ್ಸಿಡಿ ಪಡೆಯುವ 10.51 ಕೋಟಿ ಗ್ರಾಹಕರಿಗೆ ವಾರ್ಷಿಕ ಬಯೋಮೆಟ್ರಿಕ್ ಇ-ಕೆವೈಸಿ ಈಗಾಗಲೇ ಕಡ್ಡಾಯವಾಗಲಿದೆ. ಇದು ಸಬ್ಸಿಡಿ ದುರುಪಯೋಗ ತಡೆಯುವುದು, ಸರಿಯಾದ ವಿತರಣೆ ಖಚಿತಪಡಿಸುವುದು ಮತ್ತು ಎಲ್‌ಪಿಜಿ ಸಿಲಿಂಡರ್‌ ಕಳ್ಳಸಾಗಾಣಿಕೆ ತಡೆಗೆ ಸಹಕಾರಿಯಾಗಲಿದೆ ಎಂದು ತಿಳಿಸಿದೆ.

ಹಾಗೇಯೆ, ಎಲ್‌ಪಿಜಿ ವಿತರಕರನ್ನು ಸಂಪರ್ಕಿಸುವಂತೆ ಸಲಹೆ ನೀಡಿರುವ ಸಚಿವಾಲಯ, ಹೆಚ್ಚಿನ ಮಾಹಿತಿಗಾಗಿ 1800-2333-555 ಸಹಾಯವಾಣಿಯನ್ನು ಸಂಪರ್ಕಿಸುವಂತೆ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

25 seconds ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

29 mins ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

1 hour ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

1 hour ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

2 hours ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

2 hours ago