ನವದೆಹಲಿ: ದೇಶದ 6ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಪ್ರತಿ ಶೈಕ್ಷಣಿಕ ವರ್ಷದಲ್ಲಿ 10 ದಿನಗಳವರೆಗೆ ಬ್ಯಾಗ್ ರಹಿತ ದಿನಗಳನ್ನು ಜಾರಿಗೊಳಿಸುವ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಮಕ್ಕಳಲ್ಲಿ ಉತ್ಸಾಹ, ಉಲ್ಲಾಸ ಹೆಚ್ಚಿಸುವುದು. ಒತ್ತಡ ಕಡಿಮೆ ಮಾಡುವುದು, ಪ್ರಾಯೋಗಿಕ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಮಾಡುವ ಉದ್ದೇಶವನ್ನು ಇದು ಹೊಂದಿದೆ.
6ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ 10 ದಿನಗಳ ಬ್ಯಾಗ್ ರಹಿತ ದಿನಗಳನ್ನು ಪರಿಚಯಿಸಬೇಕು ಎಂದು ಎನ್‌ಇಪಿ 2020 ಶಿಫಾರಸು ಮಾಡಿತ್ತು. ಅದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತಿನ ಅಂಗಸಂಸ್ಥೆಯಾದ ಪಂಡಿತ್ ಸುಂದರ್‌ಲಾಲ್ ಶರ್ಮಾ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಫಾರ್ ವೋಕೇಷನಲ್ ಎಜುಕೇಷನ್ ಈ ಕುರಿತು ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ನಾಲ್ಕನೇ ವರ್ಷಾಚರಣೆ ಸಂದರ್ಭಗಳಲ್ಲಿ ಅದನ್ನು ಬಿಡುಗಡೆ ಮಾಡಲಾಗಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…