ಹೊಸದಿಲ್ಲಿ: ರಾಜ್ಯದ ಮಾವು ಬೆಳೆಗಾರರಿಗೆ ಸ್ಪಂದಿಸುವಂತೆ ಕೋರಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬರೆದಿದ್ದ ಪತ್ರಕ್ಕೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಾರುಕಟ್ಟೆ ಮದ್ಯಪ್ರವೇಶ ಯೋಜನೆಯಡಿ ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ.
ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ ಅಡಿಯಲ್ಲಿ 2025-2 6ನೇ ಸಾಲಿಗೆ ಅನ್ವಯ ಆಗುವಂತೆ 2,50,000 ಮೆಟ್ರಿಕ್ ಟನ್ ಮಾವನ್ನು ಪ್ರತೀ ಕ್ವಿಂಟಾಲ್ ಗೆ ₹1616 ರಂತೆ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಘೋಷಣೆ ಮಾಡಿದ್ದಾರೆ.
ಮನವಿ ಮಾಡಿದ ಕೂಡಲೇ ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರದ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಧನ್ಯವಾದ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention Scheme-MIS) ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಪತ್ರ ಬರೆದಿದ್ದ ಸಚಿವರು: ಇದಕ್ಕೂ ಮುನ್ನ ಸಚಿವ ಕುಮಾರಸ್ವಾಮಿ ಅವರು, ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದರು.
ಕರ್ನಾಟಕದ ಗ್ರಾಮೀಣ ಭಾಗದಲ್ಲಿ ಮಾವು ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ಕಷ್ಟಕ್ಕೆ ಸಿಲುಕಿದ್ದಾರೆ. ಸರಿಯಾದ ಬೆಲೆ ಸಿಗದ ಕಾರಣಕ್ಕೆ ಮಾವನ್ನು ರಸ್ತೆಗೆ ಸುರಿಯುತ್ತಿದ್ದಾರೆ. ಇಂಥ ಕಷ್ಟಕಾಲದಲ್ಲಿ ತಾವು ರೈತರ ನೆರವಿಗೆ ಧಾವಿಸಬೇಕು ಎಂದು ಕುಮಾರಸ್ವಾಮಿ ಅವರು ಕೋರಿದ್ದರು.
ಮಾವು ಕರ್ನಾಟಕದ ಪ್ರಮುಖ ತೋಟಗಾರಿಕಾ ಬೆಳೆಗಳಲ್ಲಿ ಒಂದಾಗಿದೆ. ಮಾವನ್ನು ರಾಜ್ಯದಲ್ಲಿ ಸುಮಾರು 1.39 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ, ಹೆಚ್ಚಾಗಿ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯಲಾಗುತ್ತದೆ. ರಬಿ ಋತುವಿನಲ್ಲಿ ಅಂದಾಜು 8ರಿಂದ 10 ಲಕ್ಷ ಟನ್ ಮಾವು ಈ ಜಿಲ್ಲೆಗಳಲ್ಲಿ ಬೆಳೆಯಲ್ಪಡುತ್ತದೆ. ದುರದೃಷ್ಟದ ಸಂಗತಿ ಎಂದರೆ, ಹವಾಮಾನ ವೈಪರೀತ್ಯದಿಂದ ರೋಗರುಜಿನ ತಗುಲಿ ಪ್ರಸಕ್ತ ವರ್ಷದಲ್ಲಿ ಮಾವಿನ ಇಳುವರಿ ಶೇ.30ರಷ್ಟು ಕಡಿಮೆಯಾಗಿದೆ ಎಂದ ಅಂಶವನ್ನು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…