ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋದ ಕಾರ್ಯಾಚರಣೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದು, ಪ್ರಯಾಣಿಕರು ಹಿಡಿಶಾಪ ಹಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ ಪ್ರಯಾಣಿಕರು ವಿಮಾನ ಹಾರಾಟದಲ್ಲಿ ವ್ಯತ್ಯಯ ಅನುಭವಿಸಿದ್ದಾರೆ.
ಇದನ್ನು ಓದಿ: ಬಿಜೆಪಿ ಹೋರಾಟ ನಡೆಸಬೇಕಾಗಿದ್ದು ಕೇಂದ್ರ ಸರ್ಕಾರದ ವಿರುದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್
ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂಡಿಗೋ ಸಂಸ್ಥೆಗೆ ಮೂಗುದಾರ ಹಾಕಿದ್ದು, ಕೇಂದ್ರವು ಇಂಡಿಗೋದ ಚಳಿಗಾಲದ ವಿಮಾನ ವೇಳಾಪಟ್ಟಿಯನ್ನು ಕಡಿತಗೊಳಿಸಿ, ಆ ಸ್ಲಾಟ್‌ಗಳನ್ನು ಇತರ ವಿಮಾನಯಾನ ಸಂಸ್ಥೆಗಳಿಗೆ ಮರು ಹಂಚಿಕೆ ಮಾಡಲಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಮ್ ಮೋಹನ್ ನಾಯ್ಡು ಅವರು, ಪರಿಸ್ಥಿತಿಯನ್ನು ನಿರ್ಣಯಿಸಲು ಸೋಮವಾರ ರಾತ್ರಿ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಲಾಗಿದೆ. ಹಿರಿಯ ಅಧಿಕಾರಿಗಳು ವಿಮಾನ ನಿಲ್ದಾಣಗಳಿಗೆ ಭೇಟಿ ನೀಡಿ ವಿಮಾನಯಾನ ಕಾರ್ಯಾಚರಣೆಗಳು ಹಾಗೂ ಪ್ರಯಾಣಿಕರ ಸೇವೆಗಳನ್ನು ಪರಿಶೀಲನೆ ನಡೆಸಲು ನಿರ್ದೇಶಿಸಲಾಗಿದೆ ಎಂದು ಹೇಳಿದ್ದಾರೆ. ಪ್ರಯಾಣಿಕರು ಗುರುತಿಸಿರುವ ಅಂತರಗಳು ಸೇರಿದಂತೆ ಯಾವುದೇ ಅಂತರವನ್ನು ಗುರುತಿಸಿದರೆ ಅವುಗಳನ್ನು ತಕ್ಷಣವೇ ಸರಿಪಡಿಸಬೇಕು ಎಂದು ಹೇಳಿದ್ದಾರೆ.





