ನವದೆಹಲಿ: ಕೇಂದ್ರ ಸರ್ಕಾರವೂ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಇಂದಿನಿಂದ 2 ರೂಪಾಯಿಗೆ ಏರಿಕೆ ಮಾಡಿದೆ.
ಎನ್‌ಡಿಎ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿದೆ. ಈ ಆದೇಶ ಇಂದಿನಿಂದಲೇ ಜಾರಿಯಾಗಲಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಏರಿಕೆ ಮಾಡುವ ನಿರ್ಧಾರ ಕೈಗೊಂಡಿದೆ.
ಅಮೆರಿಕಾದ ಡೊನಾಲ್ಡ್ ಟ್ರಂಪ್ ಸರ್ಕಾರ ತೆರಿಗೆ ಸಮರ ಘೋಷಿಸಿದ ಬಳಿಕ ಒಂದು ವಾರದಲ್ಲಿಯೇ ಕಚ್ಚಾ ತೈಲ ದರ ಒಂದು ಬ್ಯಾರೆಲ್ (159 ಲೀಟರ್) ಬೆಲೆ ಸುಮಾರು 10 ಡಾಲರ್ (ಅಂದಾಜು 850 ರೂ.) ಇಳಿಕೆ ಕಂಡಿದೆ.





