ದೇಶ- ವಿದೇಶ

ಸರ್ಕಾರಿ ಉದ್ಯೋಗಿಗಳು ಬೆಳಿಗ್ಗೆ 9.15ಕ್ಕೆ ಕಚೇರಿ ತಲುಪಬೇಕು; ಕೇಂದ್ರ ಸರ್ಕಾರ ಖಡಕ್‌ ಸೂಚನೆ

ನವದೆಹಲಿ: ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಮಹತ್ವದ ಆದೇಶವನ್ನು ನೀಡಿದ್ದು, ಇನ್ನು ಮುಂದೆ ಬೆಳಿಗ್ಗೆ 9.15ಕ್ಕೆ ಕಚೇರಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಆದೇಶ ನೀಡಿದೆ. ಒಂದು ವೇಳೆ ತಡವಾದರೆ ಅರ್ಧ ದಿನದ ಕ್ಯಾಶುಯಲ್‌ ರಜೆಯನ್ನು ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಈ ಮೂಲಕ ಕೇಂದ್ರ ಸರ್ಕಾರ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಖಡಕ್‌ ಆದೇಶವೊಂದನ್ನು ನೀಡಿದೆ. ಕಚೇರಿಗೆ ತಡವಾಗಿ ಬರುವ ಸಿಬ್ಬಂದಿಗಳಿಗೆ ಕೇಂದ್ರ ಸರ್ಕಾರ ಚಾಟಿ ಬೀಸಿದ್ದು, ಇನ್ನು ಮುಂದೆ ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಬೆಳಿಗ್ಗೆ 9.15ರೊಳಗೆ ಕೆಲಸಕ್ಕೆ ಬರುವಂತೆ ಸೂಚಿಸಿದೆ.

ಇದರಲ್ಲಿ 15 ನಿಮಿಷಗಳ ಗ್ರೇಸ್‌ ಅವಧಿಯೂ ಸೇರಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಕಚೇರಿಗೆ 9.15ಕ್ಕೆ ತಲುಪಿ ಆಧಾರ್‌ ಸಕ್ರಿಯಗೊಳಿಸಿದ ಬಯೋಮೆಟ್ರಿಕ್‌ ವ್ಯವಸ್ಥೆಯನ್ನು ಬಳಸಿಕೊಂಡು ತಮ್ಮ ಹಾಜರಾತಿಯನ್ನು ಹಾಕಬೇಕು ಎಂದು ಸೂಚಿಸಿದೆ.

ಸಿಬ್ಬಂದಿಗಳು ಒಂದು ವೇಳೆ ಬೆಳಿಗ್ಗೆ 9.15ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ಕ್ಯಾಶುಯೆಲ್‌ ರಜೆಯನ್ನು ಕಡಿತಗೊಳಿಸಲಾಗುವುದು. ಕೇಂದ್ರ ಸರ್ಕಾರದ ಕಚೇರಿಗಳು ಬೆಳಿಗ್ಗೆ 9ರಿಂದ ಸಂಜೆ 5.30ರವರೆಗೆ ಕಡ್ಡಾಯವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಇನ್ನೂ ವರದಿಯ ಪ್ರಕಾರ ಸಿಬ್ಬಂದಿಗಳಿಗೆ ಒಂದು ದಿನ ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಮುಂಚಿತವಾಗಿ ತಿಳಿಸಲು ನೌಕರರಿಗೆ ಸುತ್ತೋಲೆಯಲ್ಲಿ ಹೇಳಲಾಗಿದೆ. ಇದಕ್ಕಾಗಿ ಕ್ಯಾಶುಯೆಲ್‌ ರಜೆಯನ್ನು ಬಳಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಚಿವ ಸುಧಾಕರ್‌ಗೆ ಇನ್ನೂ ಪ್ರಜ್ಞೆ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಲ್ಲಿನ ಕಿಮ್ಸ್‌ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯದ ಯೋಜನೆ ಮತ್ತು ಸಾಂಖ್ಯಿತ ಇಲಾಖೆ ಸಚಿವ…

13 mins ago

ಹಕ್ಕಿಜ್ವರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ

ಬೆಂಗಳೂರು: ಹಕ್ಕಿಜ್ವರ ನಿಯಂತ್ರಣದ ಸಲುವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಕೋಳಿ, ಮಾಂಸ ಮತ್ತು ಮೊಟ್ಟೆಗಳನ್ನು…

33 mins ago

ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ: ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ನಲ್ಲಿ 100ಕ್ಕೆ 100 ಗೊಂದಲ ಇರುವುದು ನಿಜ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಾಚುನಾವಣೆಯಲ್ಲಿ…

45 mins ago

ಬೆಂಜಮಿನ್‌ ನೆತನ್ಯಾಹುಗೆ ಪ್ರಾಸ್ಟೇಟ್‌ ಕ್ಯಾನ್ಸರ್:‌ ಪ್ರಾರಂಭಿಕ ಹಂತದಲ್ಲೇ ಚಿಕಿತ್ಸೆ

ಇಸ್ರೇಲ್:‌ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು,…

1 hour ago

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.…

1 hour ago

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ನಿಂದ ಅನ್ಯಾಯ : ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಮುಸ್ಲಿಂ ಧರ್ಮಗುರುಗಳು

ಮಂಡ್ಯ : ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೈಗೊಂಡ ಶಿಸ್ತು ಕ್ರಮ ಇದೀಗ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.…

2 hours ago