ದೇಶ- ವಿದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಯೋಜನೆ ಘೋಷಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹೊಸ ಪಿಂಚಣಿ ಯೋಜನೆ ಏಕೀಕೃತ ಪಿಂಚಣಿ ಯೋಜನೆಗೆ ಅನುಮೋದನೆ ನೀಡಿದೆ.

ಈ ಮೂಲಕ ಇನ್ನು ಮುಂದೆ ಸರ್ಕಾರಿ ನೌಕರರು ಯುಪಿಎಸ್‌ ಪಿಂಚಣಿ ಯೋಜನೆಯ ಲಾಭವನ್ನು ಪಡೆಯುತ್ತಾರೆ.

ಮೋದಿ ಸರ್ಕಾರ ನೌಕರರಿಗೆ ಹೊಸ ಪಿಂಚಣಿ ನೀತಿಯನ್ನು ಪ್ರಕಟಿಸಿದ್ದು, ಹೊಸ ಪಿಂಚಣಿ ನೀತಿಯ ಹೆಸರು ಏಕೀಕೃತ ಪಿಂಚಣಿ ಯೋಜನೆಯಾಗಿದೆ.

ಇದರ ಅಡಿಯಲ್ಲಿ ಒಬ್ಬ ಉದ್ಯೋಗಿಯು ಕನಿಷ್ಠ 25 ವರ್ಷಗಳ ಕಾಲ ಕೆಲಸ ಮಾಡಿದ್ದರೆ, ನಿವೃತ್ತಿಯ ಹಿಂದಿನ 12 ತಿಂಗಳುಗಳ ಸರಾಸರಿ ವೇತನದ ಕನಿಷ್ಠ 50 ಪ್ರತಿಶತವನ್ನು ಪಿಂಚಣಿಯಾಗಿ ಪಡೆಯುತ್ತಾನೆ.

ಈ ಬಗ್ಗೆ ಮಾತನಾಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್‌ ಅವರು, ಇಂದು ಕೇಂದ್ರ ಸಚಿವ ಸಂಪುಟವು ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆಗೆ ಅನುಮೋದನೆ ನೀಡಿದೆ. ಶೇಕಡಾ 50 ರಷ್ಟು ಖಚಿತವಾದ ಪಿಂಚಣಿ ಯೋಜನೆಯೆ ಮೊದಲ ಆಧಾರವಾಗಿದೆ. ಎರಡನೇ ಆಧಾರವು ಖಚಿತವಾದ ಕುಟುಂಬ ಪಿಂಚಣಿಯಾಗಿದೆ. ಸರಿಸುಮಾರು 23 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ ಪಿಂಚಣಿ ಲಭ್ಯವಿರುತ್ತದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

48 mins ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

2 hours ago

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…

2 hours ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

2 hours ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

2 hours ago

ದಸರಾ ಸಂಭ್ರಮಕ್ಕೆ ಸುಗಮ ಸಂಚಾರದ ಸಾಥ್

ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…

2 hours ago