ದೇಶ- ವಿದೇಶ

ಕೇಂದ್ರದಿಂದ ರಾಜ್ಯಗಳಿಗೆ ಬಿಗ್‌ ಗಿಫ್ಟ್:‌ ವಿಶೇಷ ಅನುದಾನ ಬಿಡುಗಡೆ

ನವದೆಹಲಿ: ರಾಜ್ಯಗಳಿಗೆ ಕೇಂದ್ರ ಸರ್ಕಾರ ಬಿಗ್‌ ಗಿಫ್ಟ್‌ ನೀಡಿದ್ದು, 50,571 ಕೋಟಿ ರೂ ಅನುದಾನವನ್ನು ಬಿಡುಗಡೆ ಮಾಡಿದೆ.

ಈ ಬಗ್ಗೆ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್‌ ಚೌಧರಿ ಅವರು ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಅರುಣಾಚಲ ಪ್ರದೇಶ, ಹರಿಯಾಣ, ಕೇರಳ, ಪಂಜಾಬ್‌, ಮತ್ತು ತೆಲಂಗಾಣ ಹೊರತುಪಡಿಸಿ ಉಳಿದ ಎಲ್ಲಾ ಅಂದರೆ 23 ರಾಜ್ಯಗಳು ಕೇಂದ್ರ ಸರ್ಕಾರ ಒದಗಿಸಿದ ಬಡ್ಡಿ ರಹಿತ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ತಿಳಿಸಿದ್ದಾರೆ.

ವಿಶೇಷ ಅನುದಾನದಲ್ಲಿ ಉತ್ತರ ಪ್ರದೇಶ ರಾಜ್ಯಕ್ಕೆ ಅತೀ ಹೆಚ್ಚು ಅಂದರೆ 7,007.93 ಕೋಟಿ, ಮಧ್ಯಪ್ರದೇಶ 5,074.94 ಕೋಟಿ ಅನುದಾನ ಪಡೆದುಕೊಂಡಿವೆ. ಕರ್ನಾಟಕಕ್ಕೆ ಅತಿ ಕಡಿಮೆ ಅಂದರೆ 2272.87 ಕೋಟಿ ಬಿಡುಗಡೆ ಮಾಡಲಾಗಿದೆ.

ಇನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು, ಈ ಬಾರಿಯ ಬಜೆಟ್‌ನಲ್ಲಿ ರಾಜ್ಯಗಳಿಗೆ ಕೇಂದ್ರದ ಬಂಡವಾಳ ಹೂಡಿಕೆಗಾಗಿ ವಿಶೇಷ ನೆರವು ಯೋಜನೆಗೆ 1.5 ಲಕ್ಷ ಕೋಟಿ ಹಂಚಿಕೆ ಮಾಡಿದ್ದರು. ಈ ಬಂಡವಾಳ ಹೆಚ್ಚಿಸಲು 50 ವರ್ಷ ಬಡ್ಡಿ ರಹಿತ ಸಾಲವನ್ನು ಕೇಂದ್ರ ಸರ್ಕಾರ ನೀಡುತ್ತಿರುವುದು ವಿಶೇಷವೆನಿಸಿದೆ.

 

AddThis Website Tools
ಆಂದೋಲನ ಡೆಸ್ಕ್

Recent Posts

ಮನಮೋಹನ್‌ ಸಿಂಗ್‌ ನಿಧನಕ್ಕೆ ರಾಹುಲ್‌ ಗಾಂಧಿ ಸಂತಾಪ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ…

5 hours ago

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಮಲ್ಲಿಕಾರ್ಜುನ ಖರ್ಗೆ ಸಂತಾಪ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದು, ಕಂಬನಿ ಮಿಡಿದಿದ್ದಾರೆ. ಈ…

5 hours ago

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಸಂತಾಪ

ಬೆಂಗಳೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ…

5 hours ago

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಬಿ.ವೈ.ವಿಜಯೇಂದ್ರ ಸಂತಾಪ

ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನ ಮೋಹನ್‌ ಸಿಂಗ್‌ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂತಾಪ…

6 hours ago

ಮನಮೋಹನ್‌ ಸಿಂಗ್‌ ವಿಧಿವಶ ಹಿನ್ನೆಲೆ: ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಾಜಿ ಪ್ರಧಾನಿ…

6 hours ago

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ತೀವ್ರ ಉಸಿರಾಟದ ತೊಂದರೆಯಿಂದ ವಿಧಿವಶರಾಗಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ…

6 hours ago