Mysore
30
light rain

Social Media

ಗುರುವಾರ, 03 ಅಕ್ಟೋಬರ್ 2024
Light
Dark

ಕೇಂದ್ರ ಬಜೆಟ್‌ನಲ್ಲಿ 9 ಕ್ಷೇತ್ರಗಳಿಗೆ ಆದ್ಯತೆ

ನವದೆಹಲಿ: ಮೂರನೇ ಬಾರಿಗೆ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರ ಹಿಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮೈತ್ರಿ ಸರ್ಕಾರ ಇಂದು ಮೂರನೇ ಅವಧಿಯ ಮೊದಲ ಬಜೆಟ್‌ ಮಂಡಿಸಿದೆ.

ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್‌ ಅವರು, ಹೊಸ ಸಂಸತ್‌ ಭವನದಲ್ಲಿ ಕೇಂದ್ರ ಬಜೆಟ್‌ ಮಂಡಿಸಿದ್ದಾರೆ.

ಮೊದಲಿಗೆ ನಿರ್ಮಲಾ ಸೀತಾರಾಮನ್‌ ಅವರು, ಬಜೆಟ್‌ ಬಗ್ಗೆ ಸಂಪೂರ್ಣ ವಿವರ ಹೇಳಿದ್ದು, ಬಜೆಟ್‌ನಲ್ಲಿ 9 ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಮೊದಲಿಗೆ ಉತ್ಪಾದಕರೆ ಮತ್ತು ಅಭಿವೃದ್ಧಿಗೆ ದೇಶ ಮೊದಲ ಆದ್ಯತೆ ನೀಡಲಾಗಿದ್ದು, ಅನ್ನದಾತರು, ಕಾರ್ಮಿಕರು, ಮಹಿಳೆಯರು, ಉದ್ಯೋಗ, ಬಡತನ ನಿರ್ಮೂಲನೆ, ಕೌಶಲ್ಯ, ಆರ್ಥಿಕತೆ, ಸಾಮಾಜಿಕ ನ್ಯಾಯ ಹಾಗೂ ನಗರಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನೂ ಸಂಶೋಧನೆಗಾಗಿ ಕೇಂದ್ರ ಸರ್ಕಾರ ಹೆಚ್ಚು ಹಣ ವಿನಿಯೋಗಿಸುತ್ತಿದೆ. ಕೃಷಿ ವ್ಯವಸ್ಥೆಯಲ್ಲಿ ಅನ್ನದಾತರಿಗೆ ಕೇಂದ್ರ ಸರ್ಕಾರ ನೆರವು ನೀಡಿದ್ದು, ಮುಂದಿನ 2 ವರ್ಷದಲ್ಲಿ 1 ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಪದ್ಧತಿ ಅಳವಡಿಕೆಗೆ ಉತ್ತೇಜನ ನೀಡಲಾಗಿದೆ.

 

Tags: