ನವದೆಹಲಿ: ದೇಶದಲ್ಲಿ ಹದಿನೆಂಟನೇ ಲೋಕಸಭೆ ರಚನೆಯಾಗಿ ಮೋದಿ ಸರ್ಕಾರವು ತನ್ನ ಮೂರನೇ ಅವಧಿಯ ಮೊದಲ ಬಜೆಟ್‌ನ್ನು ಮಂಡಿಸಲು ಹೊರಟಿದ್ದು, ಕೇಂದ್ರ ಬಜೆಟ್ 2024ರ ದಿನಾಂಕಗಳನ್ನು ಸಹ ಘೋಷಣೆ ಮಾಡಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ.೨೩ರಂದು ಸಂಸತ್ತಿನಲ್ಲಿ ಬಜೆಟ್ ಮಂಡಿಸಲಿದ್ದಾರೆ.
ವಾಸ್ತವವಾಗಿ ೧೮ನೇ ಲೋಕಸಭೆಯ ಮೊದಲ ಅಧಿವೇಶನ ಮುಗಿದಿದೆ. ಇದರಲ್ಲಿ ನೂತನವಾಗಿ ಆಯ್ಕೆಯಾದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆದಿದ್ದು, ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸಭೆಯನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿದ್ದರು. ಈಗ ಎಲ್ಲರ ಕಣ್ಣು ಕೇಂದ್ರ ಬಜೆಟ್‌ನತ್ತ ನೆಟ್ಟಿದ್ದು, ಸಂಸತ್ ಅಧಿವೇಶನ ಜುಲೈ.೨೨ರಿಂದ ಆಗಸ್ಟ್.೧೨ರವರೆಗೆ ನಡೆಯಲಿದೆ.
ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಬಜೆಟ್ ಅಧಿವೇಶನದ ಬಗ್ಗೆ ಮಾಹಿತಿ ನೀಡಿದ್ದಾರೆ. ೨೦೨೨-೨೫ನೇ ಸಾಲಿನ ಕೇಂದ್ರ ಬಜೆಟ್‌ನ್ನು ೨೦೨೪ರ ಜುಲೈ.೨೩ರಂದು ಲೋಕಸಭೆಯಲ್ಲಿ ಮಂಡಿಸಲಾಗುತ್ತದೆ ಎಂದು ಬರೆದುಕೊಂಡಿದ್ದಾರೆ.
ಈ ಬಾರಿಯ ಬಜೆಟ್ ಮಂಡನೆಯೊಂದಿಗೆ ಹಾಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ವಿಶಿಷ್ಟ ದಾಖಲೆಯೊಂದು ದಾಖಲಾಗಲಿದೆ. ಏಕೆಂದರೆ, ಈ ಮೂಲಕ ಸತತ ಏಳು ಬಾರಿ ಕೇಂದ್ರ ಬಜೆಟ್ ಮಂಡಿಸಿದ ಮೊದಲ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆಗೆ ನಿರ್ಮಲಾ ಸೀತಾರಾಮನ್ ಪಾತ್ರರಾಗಲಿದ್ದಾರೆ. ಈ ವಿಷಯದಲ್ಲಿ ಅವರು ಮೊರಾರ್ಜಿ ದೇಸಾಯಿಯವರನ್ನು ಹಿಂದಿಕ್ಕುತ್ತಾರೆ. ದೇಸಾಯಿ ಅವರು ಸತತ ಆರು ಬಾರಿ ಬಜೆಟ್ ಮಂಡಿಸಿದ್ದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…